ರಾಯಚೂರು: ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಎತ್ತಿಟ್ಟ ಪ್ರಕರಣ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ಆರಂಭಿಸಲಾಗಿದೆ.
ಸರ್ಕಾರಿ ಬಸ್ ಸೇರಿದಂತೆ ವಾಹನಗಳ ಸಂಚಾರವೆಲ್ಲವೂ ಸ್ಥಗಿತಗೊಂಡಿದೆ. ಪ್ರಮುಖ ರಸ್ತೆಗಳಲ್ಲಿಯೇ ಪ್ರತಿಭಟನಾಕಾರರು ಕುಳಿತಿದ್ದು, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಗಡೀಪಾರು ಮಾಡಬೇಕು ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.
ರಾಯಚೂರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಡಾ.ಬಾಬು ಜಗಜೀವನರಾಂ ವೃತ್ತ, ಸಾತ್ ಮೈಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿವೆ. ಸಿಂಧನೂರು, ದೇವದುರ್ಗ, ಮಾನ್ವಿ, ಲಿಂಗಸುಗೂರು, ಮಸ್ಕಿ ಹಾಗೂ ಸಿರವಾರ ಎಲ್ಲ ತಾಲ್ಲೂಕು ಕೇಂದ್ರಗಳು ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.