ADVERTISEMENT

ಸರ್ಕಾರದ ಸೌಲಭ್ಯಗಳ ಸದ್ಬಳಕೆ ಅಗತ್ಯ

ಗ್ರಾಮ ಪಂಚಾಯಿತಿ ಆರೋಗ್ಯ ಅಮೂರ್ತ ಅಭಿಯಾನಕ್ಕೆ ಚಾಲನೆ, ಆರೋಗ್ಯ ಕಿಟ್‌ಗಳ ವಿತರಣೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 11:45 IST
Last Updated 6 ನವೆಂಬರ್ 2021, 11:45 IST
ಮಾನ್ವಿಯಲ್ಲಿ ಶನಿವಾರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್‌ಗಳನ್ನು ವಿತರಿಸಿದರು
ಮಾನ್ವಿಯಲ್ಲಿ ಶನಿವಾರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್‌ಗಳನ್ನು ವಿತರಿಸಿದರು   

ಪ್ರಜಾವಾಣಿ ವಾರ್ತೆ

ಮಾನ್ವಿ: ‘ವಿವಿಧ ಇಲಾಖೆಗಳ ಸಿಬ್ಬಂದಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜನರ ಸೇವೆ ಮಾಡಬೇಕು’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಶನಿವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್( ಕೆ.ಎಚ್.ಸಿ.ಟಿ.) ವತಿಯಿಂದ ಗ್ರಾಮ ಪಂಚಾಯಿತಿ ಆರೋಗ್ಯ ಅಮೂರ್ತ ಅಭಿಯಾನ ಹಾಗೂ ಆರೋಗ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ, ಆಶಾ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ವಿತರಣೆ ಮಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್, ವೈದ್ಯಾಧಿಕಾರಿ ಡಾ.ಅಂಬಿಕಾ ಮಧುಸೂದನ, ಡಾ.ಶರಣಬಸವ ಪಾಟೀಲ್ ಮುಷ್ಟೂರು, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ನ ವ್ಯವಸ್ಥಾಪಕ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.