ADVERTISEMENT

ಜಿಲ್ಲಾಸ್ಪತ್ರೆ ಸ್ಥಳಾಂತರ ವಿರೋಧಿಸಿ ಲಿಂಗಸುಗೂರು ಬಂದ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 5:43 IST
Last Updated 3 ಜೂನ್ 2025, 5:43 IST
   

ಲಿಂಗಸುಗೂರು (ರಾಯಚೂರು ಜಿಲ್ಲೆ) : ಜಿಲ್ಲಾಸ್ಪತ್ರೆ ಸಿಂಧನೂರಿಗೆ ಸ್ಥಳಾಂತರ ವಿರೋಧಿಸಿ ಲಿಂಗಸುಗೂರು ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆಯಿಂದ ಅಂಗಡಿ, ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡುವ ಮೂಲಕ ವರ್ತಕರು ಬೆಂಬಲ ಸೂಚಿಸಿದ್ದಾರೆ. ಶಾಲಾ ಕಾಲೇಜು ಬಂದ್ ಮಾಡಲಾಗಿದೆ. ಪಟ್ಟಣದಿಂದ ಗ್ರಾಮೀಣ ಭಾಗಕ್ಕೆ ತೆರಳುವ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ವಾಹನಗಳು ಇಲ್ಲದೆ ಜನ ಪರದಾಡುವಂತಾಗಿದೆ.

ಈಶ್ವರ ದೇವಸ್ಥಾನದಲ್ಲಿ ಸೇರಿರುವ ಹೋರಾಟಗಾರರು ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ರ್‍ಯಾಲಿ ಆರಂಭಿಸಿದ್ದಾರೆ. ಶಾಸಕ ಮಾನಪ್ಪ ವಜ್ಜಲ್, ತಾಲ್ಲೂಕಿನ ಮುಖಂಡರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.