ADVERTISEMENT

ಡಿಕೆಶಿ ವಿಡಿಯೊ ಕೊಡಲಿ, ಆ ಬಗ್ಗೆ ತನಿಖೆ ನಡೆಸಲಾಗುವುದು: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 8:03 IST
Last Updated 28 ನವೆಂಬರ್ 2020, 8:03 IST
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ   

ರಾಯಚೂರು: 'ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಸಂತೋಷ್ ಆತ್ಮಹತ್ಯೆಗೆ ವಿಡಿಯೊ ಕಾರಣ ಎಂದು ಡಿ.ಕೆ. ಶಿವಕುಮಾರ್ ಹೇಳಿರುವಂತೆ, ಆ ವಿಡಿಯೊ ಒದಗಿಸುವ ಕೆಲಸ ಮಾಡಲಿ. ಆ ಬಗ್ಗೆಯೂ ತನಿಖೆ ನಡೆಸಲಾಗುವುದು' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

'ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ‌ ಮಾಹಿತಿ ಬಂದಿದೆ. ಸದಾಶಿವ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಘಟನೆ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಲಾಗುವುದು' ಎಂದು ತಿಳಿಸಿದರು.

'ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಮತ್ತು‌ ವ್ಯವಸ್ಥೆಯ ಆಧುನೀಕರಣ ಮಾಡುವ ಮೊದಲ ಚರಣ‌ ಮುಗಿದಿದೆ. ಇನ್ನೂ ಕೆಲವು ಬಾಕಿ ಉಳಿದಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಆಧುನೀಕರಣ ‌ಪ್ರಕ್ರಿಯೆ ಮುಂದುರಿಸಲಾಗುವುದು. ಇದಕ್ಕಾಗಿ ಕೆಕೆಆರ್‌ಡಿಬಿಯಿಂದಲೂ ಈ‌ ಭಾಗದಲ್ಲಿ ಅನುಕೂಲ ಕಲ್ಪಿಸಲು ಅನುದಾನ ಪಡೆಯಲಾಗುವುದು' ಎಂದರು.

ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಚೇರಿಯಲ್ಲಿ ಶನಿವಾರ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.