ರಾಯಚೂರು: ಸೂರ್ಯಕಾಂತಿ ಬೆಳೆಯಲ್ಲಿ ಕಾಣಿಸಿಕೊಂಡಿರುವ ನೆಕ್ರೋಸಿಸ್ ನಂಜಾಣು ರೋಗದ ನಿಯಂತ್ರಣಕ್ಕಾಗಿ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಪ್ರಕಾಶ ಟಿ.ಸಿ. ತಿಳಿಸಿದ್ದಾರೆ.
ಸೂರ್ಯಕಾಂತಿ ಬೆಳೆಯಲ್ಲಿ ನೆಕ್ರೋಸಿಸ್ ನಂಜಾಣು ರೋಗವು ಎಲೆಗಳ ಅಂಚಿನಿಂದ ಒಣಗುವಿಕೆ ಆರಂಭಗೊಂಡು ಕಾಂಡದ ಮೂಲಕ ಬೆಳೆಯುವ ಚಿಗುರಿಗೆ ವ್ಯಾಪಿಸಿಕೊಳ್ಳುತ್ತದೆ. ಇದರಿಂದ ಗಿಡಗಳು ಮುರುಟಾಗಿ ಬೆಳವಣಿಗೆ ನಿಲ್ಲುತ್ತದೆ ಹಾಗೂ ಕಾಳು ಕಟ್ಟುವುದಿಲ್ಲ.
ನಿರ್ವಹಣಾ ಕ್ರಮಗಳು: ಪ್ರತಿ ಕೆ.ಜಿ. ಬೀಜಕ್ಕೆ 5 ಗ್ರಾಂ. ಇಮಿಡಾಕ್ಲೋಪ್ರಿಡ್ 70 ಡಬ್ಲೂಎಸ್ ಕೀಟನಾಶಕದ ಬೀಜೋಪಚಾರ ಮಾಡಬೇಕು. ಹೊಲದಲ್ಲಿ ರೋಗಗ್ರಸ್ಥ ಗಿಡಗಳನ್ನು ಕಿತ್ತು ನಾಶಪಡಿಸಬೇಕು. ಹೊಲದ ಸುತ್ತಲೂ 3–4 ಸಾಲು ಎತ್ತರಕ್ಕೆ ಬೆಳೆಯುವ ಜೋಳ ಅಥವಾ ಮೆಕ್ಕೆಜೋಳ ಅಥವಾ ಸಜ್ಜೆಯನ್ನು15 ದಿನಗಳ ಮುಂಚೆ ಬಿತ್ತಬೇಕು. ಬಿತ್ತಿದ 30 ದಿನಗಳ ನಂತರ 0.25 ಮೀ.ಲೀ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಪಾರ್ಥೇನಿಯಂ ಮತ್ತು ಕಾಂಥಿಯ ಕಳೆಗಳನ್ನು ನಾಶಪಡಿಸಬೇಕು. ರೋಗಗ್ರಸ್ಥ ಗಿಡಗಳನ್ನು ಕಿತ್ತು ನಾಶಪಡಿಸಬೇಕು.
ಹೆಚ್ಚಿನ ಮಾಹಿತಿಗೆ ಸಮೀಪ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.