ADVERTISEMENT

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ: ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 13:56 IST
Last Updated 14 ಏಪ್ರಿಲ್ 2021, 13:56 IST
ರಾಯಚೂರಿನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ದಿನದಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರೆಲ್ಲರೂ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು
ರಾಯಚೂರಿನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ದಿನದಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರೆಲ್ಲರೂ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು   

ರಾಯಚೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರ ನೇತೃತ್ವದಲ್ಲಿ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು.

ಮಸ್ಕಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹಾಗೂ ಕೊರಾನಾ ಸೋಂಕು ಹಿನ್ನಲೆಯಲ್ಲಿ ಈ ಬಾರಿ ಅತ್ಯಂತ ಸರಳವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ, ಅಪರ ಜಿಲ್ಲಾಧಿಕಾರಿ ಕೆ.ಎಚ್. ದುರುಗೇಶ್, ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ನಮಿಸಿದರು.

ADVERTISEMENT

ವಿವಿಧ ಮುಖಂಡರು, ಜನಪ್ರತಿನಿಧಿಗಳು, ಅಭಿಮಾನಿಗಳು ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.