ADVERTISEMENT

ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನ: ಪುಷ್ಪನಮನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 13:31 IST
Last Updated 6 ಡಿಸೆಂಬರ್ 2022, 13:31 IST
ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮಹಾನಿರ್ವಾಣ ದಿನದಂದು ರಾಯಚೂರಿನಲ್ಲಿ ಮಂಗಳವಾರ ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ರಾಯಚೂರು: ಜಿಲ್ಲೆಯ ವಿವಿಧೆಡೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮಹಾನಿರ್ವಾಣ ದಿನ ಆಚರಿಸಲಾಯಿತು.

ಮಹಾಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆಯ ವತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಅಂಬೇಡ್ಕರ್ ಅವರ ವಿಚಾರಧಾರೆಗಳು, ಚಿಂತನೆಗಳು ಹಾಗೂ ದೇಶಕ್ಕಾಗಿ ಅವರು ನೀಡಿದ ಕೊಡುಗೆಗಳನ್ನು ಹಾಗೂ ಅವರ ಸಾಧನೆ ಮತ್ತು ಹೋರಾಟಗಳನ್ನು ಸ್ಮರಿಸಲಾಯಿತು.

ADVERTISEMENT

ನಗರಸಬೆ ಅಧ್ಯಕ್ಷೆ ಲಲಿತಾ ಕಡಗೋಲ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ, ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಭಂತೇಜಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.