ADVERTISEMENT

ಸಮವಸ್ತ್ರದಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ ಆರೋಪ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 14:39 IST
Last Updated 7 ನವೆಂಬರ್ 2019, 14:39 IST

ರಾಯಚೂರು: ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರು ವಿದ್ಯಾರ್ಥಿನಿಯರಿಗೆ ಸಮವಸ್ತ್ರ ನಿಗದಿಪಡಿಸಿದ್ದು ಇದರಿಂದ ಅನಗತ್ಯ ಕಿರುಕುಳ ಅನುಭವಿಸುವಂತಾಗಿದೆ ಎಂದು ಹೈದರಾಬಾದ್ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕ ಜಿಲ್ಲಾ ಅಧ್ಯಕ್ಷ ಎಂ.ಡಿ.ರಫಿಖ್ ಆರೋಪಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿ, ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಚಾರ್ಯರು 2019–20ನೇ ಸಾಲಿನಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಸಮವಸ್ತ್ರ ಧರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ಬದ್ಧತೆ, ಕಲಿಕೆಯ ವಾತಾವರಣ ನಿರ್ಮಾಣವಾಗುತ್ತದೆ ಎನ್ನುವುದು ಸತ್ಯಾಂಶ. ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿ ಪ್ಯಾಂಟ್–ಶರ್ಟ್ ಹಾಗೂ ಕೋಟ್ ಹಾಕಿಕೊಂಡು ಬರುವಂತೆ ನಿಯಮ ಮಾಡಿರುವುದು ವಿದ್ಯಾರ್ಥಿಗಳಿಗೆ ನುಂಗಲಾರದ ತುತ್ತಾಗಿದೆ.

ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಈ ರೀತಿ ಸಮವಸ್ತ್ರ ಧರಿಸಲು ಆರ್ಥಿಕವಾಗಿ ಸಬಲರು ಆಗಿಲ್ಲ. ವಿದ್ಯಾರ್ಥಿನಿಯರಿಗೆ ಈ ಸಮವಸ್ತ್ರ ಇರಿಸು ಮುರುಸು ಉಂಟುಮಾಡುತ್ತಿದೆ ಎಂದು ಬಹಳಷ್ಟು ವಿದ್ಯಾರ್ಥಿಗಳು ಅಳಲನ್ನು ತೋಡಿಕೊಂಡಿದ್ದಾರೆ. ಆದ್ದರಿಂದಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಿ ಸದರಿ ಸಮವಸ್ತ್ರದಿಂದ ಮುಕ್ತಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.