ADVERTISEMENT

ಗೌಡನಭಾವಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 4:17 IST
Last Updated 21 ಮಾರ್ಚ್ 2022, 4:17 IST
ಮಸ್ಕಿ ತಾಲ್ಲೂಕಿನ ಗೌಡನಭಾವಿ ಗ್ರಾಮದಲ್ಲಿ ಭಾನುವಾರ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಆರ್.ಬಸನಗೌಡ ಚಾಲನೆ ನೀಡಿದರು
ಮಸ್ಕಿ ತಾಲ್ಲೂಕಿನ ಗೌಡನಭಾವಿ ಗ್ರಾಮದಲ್ಲಿ ಭಾನುವಾರ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಆರ್.ಬಸನಗೌಡ ಚಾಲನೆ ನೀಡಿದರು   

ಮಸ್ಕಿ: ಶಾಸಕರ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿ ಕೈಗೊಂಡ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಶಾಸಕ ಆರ್. ಬಸನಗೌಡ ಭಾನುವಾರ ಚಾಲನೆ ನೀಡಿದರು.

ತಾಲ್ಲೂಕಿನ ಸುಂಕನೂರು, ಚಿಕ್ಕ ಕಡಬೂರು, ಗೌಡನಭಾವಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ಸಮುದಾಯ ಭವನ, ಕುಡಿಯುವ ನೀರಿನ ಯೋಜನೆ ಚಾಲನೆ ನೀಡಿ ಮಾತನಾಡಿದ ಶಾಸಕ ಆರ್. ಬಸನಗೌಡ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು. ಮಾದರಿ ತಾಲ್ಲೂಕು ನಿರ್ಮಾಣಕ್ಕೆ ಆಧ್ಯತೆ ನೀಡಲಾಗಿದೆ ಎಂದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.