ADVERTISEMENT

ಕವಿತಾಳ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 14:27 IST
Last Updated 26 ಅಕ್ಟೋಬರ್ 2024, 14:27 IST
ಕವಿತಾಳ ಸಮೀಪದ ಹಾಲಾಪುರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಶುಕ್ರವಾರ ಚಾಲನೆ ನೀಡಿದರು
ಕವಿತಾಳ ಸಮೀಪದ ಹಾಲಾಪುರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಶುಕ್ರವಾರ ಚಾಲನೆ ನೀಡಿದರು   

ಕವಿತಾಳ: ‘ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪಕ್ಷದ ಬಲವರ್ಧನೆಗೆ ಸಹಕರಿಸಬೇಕು’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಸೂಚಿಸಿದರು.

ಇಲ್ಲಿಗೆ ಸಮೀಪದ ಹಾಲಾಪುರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ಬೂತ್‌ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಸ್ಥಳೀಯ ಕಾರ್ಯಕರ್ತರು ಕಾಳಜಿ ವಹಿಸಿ ಕೆಲಸ ಮಾಡಬೇಕು’ ಎಂದರು.‌

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಚಂದ್ರಕಾಂತ ಪಾಟೀಲ, ಮಸ್ಕಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ, ಮುಖಂಡರಾದ ಸಂತೋಷ ರಾಜಗುರು, ಮಲ್ಲಣ್ಣ ರ್ಯಾವಣಕಿ, ವೀರನಗೌಡ ದಳಪತಿ, ಪರಯ್ಯ ಸ್ವಾಮಿ, ಅಮರಪ್ಪಗೌಡ, ಚನ್ನಬಸವ ಪಾಟೀಲ, ಶೇಖರಯ್ಯಸ್ವಾಮಿ, ಜಮದಗ್ನಿ ನಾಯಕ, ವಿರೂಪಾಕ್ಷ ಎಚ್.ಕೆ., ಯಂಕಪ್ಪ ನಾಯಕ ಮತ್ತು ಸಿದ್ದಾರ್ಥ ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.