ಮಸ್ಕಿ: ಮದ್ಯಪಾನ ಮಾಡಿ ಶಾಲೆಗೆ ಬಂದು ಬಿಸಿಯೂಟ ಕೊಠಡಿ ಮುಂದೆ ಮಲಗಿದ್ದ ಮುಖ್ಯಶಿಕ್ಷಕ ನಿಂಗಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ತಾಲ್ಲೂಕಿನ ಗೋನಾಳ ಗ್ರಾಮದ ಅಂಭಾದೇವಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ನಿಂಗಪ್ಪ ಅವರು ಗುರುವಾರ ಕುಡಿದು ಶಾಲೆಯ ಬಿಸಿಯೂಟದ ಕೊಣೆಯ ಮುಂದೆ ಮಲಗಿದ್ದರು. ಈ ಕುರಿತು ‘ಪ್ರಜಾವಾಣಿ’ ಯಲ್ಲಿ ವರದಿ ಪ್ರಕಟವಾಗಿತ್ತು.
ಸ್ಥಳೀಯರು ಕೂಡಾ ಮುಖ್ಯಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.