
ಪ್ರಜಾವಾಣಿ ವಾರ್ತೆ
ರಾಯಚೂರು: ಹೊರನಾಡು ಕನ್ನಡಿಗರೊಂದಿಗೆ ದುಬೈನಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ವಿಶ್ವ ಕನ್ನಡ ಸಮ್ಮೇಳನದ ಅಧ್ಯಕ್ಷರಾಗಿ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಶ್ರೀದೇವಿ ನಾಯಕ ಆಯ್ಕೆಯಾಗಿದ್ದಾರೆ.
ಕಲಾ ಸಂಕುಲ ಸಂಸ್ಥೆ ಮತ್ತು ದುಬೈ ಕನ್ನಡ ಸಾಂಸ್ಕೃತಿಕ ಸಂಘಟನಾ ಸಂಸ್ಥೆ ಜಂಟಿಯಾಗಿ ಮಾರ್ಚ್‌ನಲ್ಲಿ ದುಬೈನಲ್ಲಿ ನಡೆಯಲಿರುವ ವಿಶ್ವಕನ್ನಡ ಸಾಂಸ್ಕೃತಿಕ ಸಮ್ಮೇಳನ ಏರ್ಪಡಿಸಿವೆ.
ಸಮ್ಮೇಳನದಲ್ಲಿ ಕವಿಗೋಷ್ಠಿ, ಮಹಿಳಾ ಗೋಷ್ಠಿ, ಚಿಂತನಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಇನ್ನಿತರ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಲಾ ಸಂಕುಲ ಸಂಸ್ಥೆ ಕಾರ್ಯದರ್ಶಿ ಮಾರುತಿ ಬಡಿಗೇರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.