ರಾಯಚೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವಿ ಭುವನೇಶ್ವರಿಯ ಭಾವಚಿತ್ರ ಹಾಗೂ ಮೂರ್ತಿಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ನಗರದ ಪಾಲಿಕೆ ಜೋನಲ್ 1ರ ಕಚೇರಿಯಿಂದ ಪ್ರಾರಂಭವಾದ ಮೆರವಣಿಗೆ ನಗರದ ಏಕ್ ಮಿನಾರ್, ತೀನ್ ಕಂದೀಲ್, ಸದಾರ್ ಬಜಾರ್ ಮೂಲಕ ಮಾಣಿಕಪ್ರಭು ಬನ್ನಿ ಮಂಟಪದವರೆಗೆ ನಡೆಯಿತು.
ಮಹಿಳೆಯರು ಕುಂಭ ಕಳಸದೊಂದಿಗೆ ಭಾಗವಹಿಸಿದ್ದರು. ಡೊಳ್ಳು ಕುಣಿತ, ಗೊಂಬೆಗಳ ಕುಣಿತ, ಹಲಗೆ, ವೀರಗಾಸೆ ಸೇರಿದಂತೆ ಹಲವು ಕಲಾತಂಡಗಳು ಸಾರ್ವಜನಿಕರ ಗಮನ ಸೆಳೆಯಿತು.
ನಗರ ಶಾಸಕ ಎಸ್.ಶಿವರಾಜ ಪಾಟೀಲ, ಪಾಲಿಕೆಯ ಮೇಯರ್ ನರಸಮ್ಮ ನರಸಿಂಹಲು ಮಾಡಗಿರಿ, ಉಪ ಮೇಯರ್ ಜೆ.ಸಾಜೀದ್ ಸಮೀರ್, ಮುಖಂಡರಾದ ಜಯಣ್ವ ಮಹಮದ್ ಶಾಲಂ, ರವಿ ಬೋಸರಾಜು, ಆಯುಕ್ತ ಜುಬಿನ್ ಮೊಹಪಾತ್ರ, ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಶರಣಬಸಪ್ಪ ಕೋಟೆಪ್ಪಗೋಳ, ಆಡಳಿತ ವಿಭಾಗದ ಉಪ ಆಯುಕ್ತ ಸಂತೋಷರಾಣಿ ಎಂ. ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಮೇನಕಾ ಪಟೇಲ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.