ADVERTISEMENT

ಶಾಲಾ ಮಕ್ಕಳಲ್ಲಿ ಅರಣ್ಯದ ಅರಿವು ಅಗತ್ಯ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 16:10 IST
Last Updated 16 ನವೆಂಬರ್ 2019, 16:10 IST
ರಾಯಚೂರು ನಗರದ ನಿಸರ್ಗಧಾಮದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ಪಿ ಶಿವಯ್ಯ ಮಾತನಾಡಿದರು
ರಾಯಚೂರು ನಗರದ ನಿಸರ್ಗಧಾಮದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ಪಿ ಶಿವಯ್ಯ ಮಾತನಾಡಿದರು   

ರಾಯಚೂರು: ಜಿಲ್ಲೆಯಲ್ಲಿ ಅರಣ್ಯ ಪ್ರದೇಶವು ತುಂಬಾ ಕಡಿಮೆ ಇದೆ. ಶಾಲಾ ಮಕ್ಕಳಿಗೆಅರಣ್ಯದ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ಪಿ ಶಿವಯ್ಯ ಹೇಳಿದರು.

ನಗರದ ನಿಸರ್ಗಧಾಮದಲ್ಲಿ ಶನಿವಾರ ಜಿಲ್ಲಾ ಪ್ರಾದೇಶಿಕ ಅರಣ್ಯ ವಿಭಾಗ ಹಾಗೂ ಪ್ರಾದೇಶಿಕ ಅರಣ್ಯ ವಲಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ 'ಕನ್ನಡ ಕಂಪು-ಅರಣ್ಯ ತಂಪು' ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲಾ ವಿದ್ಯಾರ್ಥಿಗಳು ಅರಣ್ಯದ ಸಂರಕ್ಷಣೆಯ ಕುರಿತು ತಮ್ಮ ಊರಿನಲ್ಲಿ, ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯ ಬಗ್ಗೆ ಜನರಿಗೆ ತಿಳಿಸಿ; ಅರಣ್ಯ ಮತ್ತು ವನ್ಯ ಜೀವಿಗಳನ್ನು ಸಂರಕ್ಷಿಸಬೇಕು ಎಂದು ತಿಳಿಸಿದರು.

ADVERTISEMENT

ತಾಲ್ಲೂಕಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮದ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ನಾಡು-ನುಡಿ ಅರಣ್ಯಕ್ಕೆ ಸಂಬಂಧಿಸಿದಂತೆ ರಸಪ್ರಶ್ನೆ ಸ್ಪರ್ಧೆ, ಭಾಷಣ ಸ್ಪರ್ಧೆ ಚಿತ್ರಕಲೆ ಸ್ಪರ್ಧೆ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇರಿಗೆ ಪ್ರಶಸ್ತಿ ವಿತರಿಸಲಾಯಿತು ಎಂದು ಹೇಳಿದರು.

ಸಾಮಾಜಿಕ ಅರಣ್ಯ ವಲಯದ ಅರಣ್ಯ ಅಧಿಕಾರಿ ಪ್ರಫುಲ್ ಶೆಟ್ಟಿ, ಪ್ರಾದೇಶಿಕ ಅರಣ್ಯ ವಲಯದ ಅರಣ್ಯ ಅಧಿಕಾರಿ ಎಂಪಿ ಮಹಾಬಲೇಶ್ವರ, ಅರಣ್ಯ ವೀಕ್ಷಕ ನಾರಾಯಣ, ರಂಗಪ್ಪ, ಅರಣ್ಯ ರಕ್ಷಕ ಯಲ್ಲಪ್ಪ ಎಮ್, ವ್ಯಂಗ್ಯ ಚಿತ್ರಕಲಾವಿದ ಈರಣ್ಣ ಬೆಂಗಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.