ADVERTISEMENT

ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ: ಶಾಸಕ ಆರ್.ಬಸನಗೌಡ ತುರ್ವಿಹಾಳ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 4:39 IST
Last Updated 21 ಜನವರಿ 2026, 4:39 IST
ಸಿಂಧನೂರು ತಾಲ್ಲೂಕಿನ ಕುರುಕುಂದಾ ಗ್ರಾಮದಲ್ಲಿ ನಡೆದ ನೂತನ ಸರ್ಕಾರಿ ಪ್ರೌಢ ಶಾಲೆ ಉದ್ಘಾಟನೆ ಹಾಗೂ 9ನೇ ತರಗತಿ ಸ್ವಾಗತ ಸಮಾರಂಭವನ್ನು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು
ಸಿಂಧನೂರು ತಾಲ್ಲೂಕಿನ ಕುರುಕುಂದಾ ಗ್ರಾಮದಲ್ಲಿ ನಡೆದ ನೂತನ ಸರ್ಕಾರಿ ಪ್ರೌಢ ಶಾಲೆ ಉದ್ಘಾಟನೆ ಹಾಗೂ 9ನೇ ತರಗತಿ ಸ್ವಾಗತ ಸಮಾರಂಭವನ್ನು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು   

ಸಿಂಧನೂರು: ‘ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ನೂರಾರು ಕೋಟಿ ಅನುದಾನ ಮಂಜೂರುಗೊಳಿಸಿ ಮೂಲಸೌಕರ್ಯ ಕಲ್ಪಿಸಲಾಗಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ತಾಲ್ಲೂಕಿನ ಕುರುಕುಂದಾ ಗ್ರಾಮದಲ್ಲಿ ನಡೆದ ನೂತನ ಸರ್ಕಾರಿ ಪ್ರೌಢ ಶಾಲೆ ಉದ್ಘಾಟನೆ ಹಾಗೂ 9ನೇ ತರಗತಿ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ಎಲ್ಲರೂ ಶಿಕ್ಷಣ ಪಡೆಯುವಂತಾಗಿದೆ. ಬಡ ಮಕ್ಕಳು ಸರ್ಕಾರಿ ಶಾಲೆ ಅವಲಂಭಿಸಿದ್ದು, ಆ ಮಕ್ಕಳಿಗೂ ಖಾಸಗಿ ಶಾಲೆಗಳಂತೆ ಮೂಲಸೌಲಭ್ಯ ಒದಗಿಸಬೇಕೆಂಬ ಚಿಂತನೆ ನಮ್ಮ ಸರ್ಕಾರದ್ದಾಗಿದೆ. 2013ರ ಆಡಳಿತ ಹಾಗೂ 2023ರಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಮಹತ್ವ ಕೊಟ್ಟಷ್ಟು ಯಾವ ಹಿಂದಿನ ಸರ್ಕಾರಗಳು ಕೊಟ್ಟಿಲ್ಲ. ಗ್ರಾಮೀಣ ಭಾಗಕ್ಕೂ ಹೈಟೆಕ್ ಸೌಲಭ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೆಪಿಎಸ್ ಶಾಲೆ ನೀಡಲಾಗಿದೆ. ಈಗ ಅವಶ್ಯಕತೆಯಿರುವ ಕಡೆಗಳಲ್ಲಿ ಸರ್ಕಾರಿ ಪ್ರೌಢ ಶಾಲೆ ಮಂಜೂರು ಮಾಡಿ, ಆ ಮಕ್ಕಳಿಗೂ ಅನುಕೂಲ ಮಾಡಿಕೊಡಲಾಗಿದೆ. ಈ ಫ್ರೌಢ ಶಾಲೆ ಕಟ್ಟಡ ಸೇರಿ ಅಭಿವೃದ್ಧಿಗೆ ₹ 6 ಕೋಟಿ ನೀಡಲಾಗಿದೆ’ ಎಂದು ಹೇಳಿದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಹುಡೇದ್, ಅಹಿಂದ್ ಮಾಜಿ ಅಧ್ಯಕ್ಷ ಕರೇಗೌಡ ಕುರಕುಂದಿ, ತುರ್ವಿಹಾಳ ವಲಯದ ಇಸಿಓ ಸಾವನ್‍ಸಾಬ ಮಾತನಾಡಿದರು.

ಶೇಖರಯ್ಯಸ್ವಾಮಿ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಶಿಕ್ಷಣ ಸಂಯೋಜಕ ಕುಮಾರಸ್ವಾಮಿ, ಬಿಆರ್‌ಪಿ ನಾಗಪ್ಪ ಕೆಲ್ಲೂರು, ಸಿಆರ್‌ಪಿ ಶಾಂತಯ್ಯ ಹಿರೇಮಠ, ಪಿಡಿಒ ಸಿದ್ದಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಯಂಕಪ್ಪ ನಿರೇರ, ಉಪಾಧ್ಯಕ್ಷೆ ಮಲ್ಲಮ್ಮ ವೀರೇಶ, ರವಿಯಪ್ಪ ಸಾಹುಕಾರ, ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಹುಲ್ಲೇಶ, ಉಪಾಧ್ಯಕ್ಷೆ ಶಾರದಾ ಶಂಕ್ರಪ್ಪ, ತಿಡಿಗೋಳ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಕೆಪಿ ದಿನೇಶ ಇದ್ದರು. ಯಮನೂರ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.