ದೇವದುರ್ಗ: ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಮಕ್ಕಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಖಿ ಕಟ್ಟಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಕಾರ್ಯಕ್ರಮದಡಿಯಲ್ಲಿ ನಡೆದ ರಾಷ್ಟ್ರಪತಿಗಳ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದಿಂದ ರಾಯಚೂರು, ಕೊಡಗು, ಬೆಳಗಾವಿ ಮತ್ತು ಕೋಲಾರ ಜಿಲ್ಲೆಯ ಬುಡಕಟ್ಟು ಸಮುದಾಯದ ವಸತಿ ಶಾಲೆಗಳ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿತ್ತು.
ವಿದ್ಯಾರ್ಥಿಗಳಾದ ಚನ್ನಬಸವ ಗಲಗ (10ನೇ ತರಗತಿ), ಭರತ್ ಕೊತ್ತದೊಡ್ಡಿ (8ನೇ ತರಗತಿ), ಮಂಜುನಾಥ ದೇವದುರ್ಗ (9ನೇ ತರಗತಿ), ಮಣಿಕಂಠ ಕೊತ್ತದೊಡ್ಡಿ (8ನೇ ತರಗತಿ) ಮತ್ತು ವೀರೇಶ ದೇವತಗಲ್ (9ನೇ ತರಗತಿ) ವಿದ್ಯಾರ್ಥಿಗಳಿಗೆ ರಾಷ್ಟ್ರಪತಿಗಳು ರಾಖಿ ಕಟ್ಟಿದ್ದಾರೆ.
ಬಳಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯ ಮತ್ತು ಅಗತ್ಯತೆಗಳ ಕುರಿತು ಚರ್ಚಿಸಿದರು. ಬುಡಕಟ್ಟು ಜನಾಂಗದವರಲ್ಲಿ ಶಿಕ್ಷಣದ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.