ADVERTISEMENT

ಶಿವನಹಳ್ಳಿ ಸೊಸೈಟಿ ನೂತನ ಅಧ್ಯಕ್ಷ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 16:18 IST
Last Updated 11 ಏಪ್ರಿಲ್ 2025, 16:18 IST
ಕೆ.ಎಂ.ರಾಜಶೇಖರ್
ಕೆ.ಎಂ.ರಾಜಶೇಖರ್   

ಕನಕಪುರ: ಇಲ್ಲಿನ ಶಿವನಹಳ್ಳಿ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಕೂತಗೊಂಡನಹಳ್ಳಿ ಕೆ.ಎಂ.ರಾಜಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೊಸೈಟಿ ಅಧ್ಯಕ್ಷ ವೀರಭದ್ರಯ್ಯ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೆ.ಎಂ.ರಾಜಶೇಖರ್ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಆಶಾ ಚುನಾವಣಾಧಿಕಾರಿಯಾಗಿ, ಸೊಸೈಟಿಯ ಸಿಇಒ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ADVERTISEMENT

ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಎನ್.ದಿಲೀಪ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ತಮ್ಮಣ್ಣ ಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ್, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಹಾಗೂ ಸೊಸೈಟಿಯ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.