ADVERTISEMENT

ಪಾಮನಕಲ್ಲೂರು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 12:21 IST
Last Updated 1 ಸೆಪ್ಟೆಂಬರ್ 2021, 12:21 IST
ಕವಿತಾಳ ಸಮೀಪದ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬುಧವಾರ ನಡೆಯಿತು
ಕವಿತಾಳ ಸಮೀಪದ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬುಧವಾರ ನಡೆಯಿತು   

ಪಾಮನಕಲ್ಲೂರು (ಕವಿತಾಳ): ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು.

ಅಧ್ಯಕ್ಷರಾಗಿ ಗುಡಿಹಾಳ ಗ್ರಾಮದ ರಾಜಾಸಾಬ್‍ (ಸಾಮಾನ್ಯ) ಮತ್ತು ಉಪಾಧ್ಯಕ್ಷರಾಗಿ ಆನಂದಗಲ್‍ ಗ್ರಾಮದ ತಿಮ್ಮಮ್ಮ ವೆಂಕಟೇಶ (ಪರಿಶಿಷ್ಟ ಪಂಗಡ ಮಹಿಳೆ) ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 26 ಜನ ಸದಸ್ಯ ಬಲ ಹೊಂದಿದ್ದು 7 ಜನ ಸದಸ್ಯರು ಗೈರಾಗಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಮಾತ್ರ ನಾಮ ಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆಗಿದ್ದ ತಹಶೀಲ್ದಾರ್ ಕವಿತಾ. ಆರ್ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.