
ರಾಯಚೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಭಾರಿ ಬಿರುಗಾಳಿಗೆ ಮರಗಳು ನೆಲಕ್ಕುರುಳಿವೆ.
ಕೆಲವು ಕಡೆ ವಿದ್ಯುತ್ ಕಂಬಗಳು ಉರುಳಿ ಬಿದ್ದರೆ, ಕೆಲವಡೆ ಬಾಗಿಕೊಂಡು ವಿದ್ಯುತ್ ತಂತಿ ತುಂಡಾಗಿದೆ.
ಅನೇಕ ಕಡೆ ಭಾನುವಾರ ರಾತ್ರಿಯಿಂದ ಸೋಮವಾರ ಮಧ್ಯಾಹ್ನದವರೆಗೂ ವಿದ್ಯುತ್ ಸಂಪರ್ಕ ಕಡಿತಕೊಂಡಿತ್ತು. ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಮರು ಸ್ಥಾಪಿಸಲು ಪ್ರಯಾಸ ಪಡಬೇಕಾಯಿತು.
ವಾಣಿಜ್ಯ ಮಳಿಗೆಗಳು, ಹೋಟೆಲ್, ರೆಸ್ಟೋರೆಂಟ್ ಹಾಗೂ ಟಿಫನ್ ಸೆಂಟರ್‌ಗಳ ಮಾಲೀಕರು ತೊಂದರೆ ಅನುಭವಿಸಿದರು. ಧಗೆ ಜನರನ್ನು ಬೆಂಬಿಡದಂತೆ ಕಾಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.