ADVERTISEMENT

’ರಾಜ್ಯದಲ್ಲಿ ತುರ್ತು ಆಡಳಿತ’

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 14:35 IST
Last Updated 6 ಸೆಪ್ಟೆಂಬರ್ 2019, 14:35 IST

ರಾಯಚೂರು: ರಾಜ್ಯದಲ್ಲಿ ತುರ್ತು ಆಡಳಿತದ ಪರಿಸ್ಥಿತಿ ಇದೆ. ಬಿಜೆಪಿ ಪರವಾಗಿ ಇಲ್ಲದ ನಾಯಕರನ್ನು ಬಂಧಿಸಿ ಒಳಗೆ ಹಾಕುವ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್.ಬಿ.ತಿಮ್ಮಾಪುರ ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪಕ್ಷ ಸಂಘಟನೆ ಕುರಿತ ಸಭೆ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್‌ನ ಬಲಿಷ್ಠ ನಾಯಕರನ್ನು ಬಲೆಗೆ ಸಿಕ್ಕಿಸುವ ಕೆಲಸ ನಡೆದಿದೆ. ಬಿಜೆಪಿ ಎದುರು ಮಾತನಾಡುವವರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಒಟ್ಟು ಕಾಂಗ್ರೆಸ್ ಮುಗಿಸುವ ಹುನ್ನಾರ ನಡೆಸಲಾಗುತ್ತಿದೆ. ಇಂಥ ನೀತಿ ಬಹಳ ದಿನ ನಡೆಯುವುದಿಲ್ಲ. ಕಾಂಗ್ರೆಸ್‌ಗೆ ನೂರಾರು ವರ್ಷದ ಇತಿಹಾಸವಿದೆ. ಇಂದಲ್ಲ ನಾಳೆ ಕಾಂಗ್ರೆಸ್ ಮೇಲೆಳಲಿದ್ದು, ಬಿಜೆಪಿ ಕತೆ ಮುಗಿಯಲಿದೆ ಎಂದರು.

ADVERTISEMENT

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಅಧಿಕಾರಿಗಳಿಗೆ ರಾಜಕೀಯ ಒತ್ತಡ ಹೆಚ್ಚಾಗುತ್ತಿದೆ. ಕಾನೂನು ಬಾಹಿರ ಚಟುವಟಿಕೆ ಮಾಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಲಾಗುತ್ತಿದೆ. ಎಲ್ಲ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿರುವುದರಿಂದ ಬೇಸತ್ತು ಅಧಿಕಾರಿಗಳು ಇಂಥ ನಿರ್ಧಾರಕ್ಕೆ ಬರುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.