ADVERTISEMENT

ಅತಿಥಿ ಉಪನ್ಯಾಸಕ, ಶಿಕ್ಷಕರ ನೇಮಕಕ್ಕೆ ಜೂನ್ 1ರಂದು ಪ್ರವೇಶ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:27 IST
Last Updated 29 ಮೇ 2025, 14:27 IST

ರಾಯಚೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಜೂನ್‌ 1ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಿದೆ.

ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ, ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಜಿಲ್ಲಾ ಕಚೇರಿ, ಮಾನ್ವಿ, ಸಿಂಧನೂರು, ಲಿಂಗಸುಗೂರು ಹಾಗೂ ದೇವದುರ್ಗದ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಭ್ಯರ್ಥಿಗಳು 2 ಭಾವಚಿತ್ರಗಳನ್ನು ಕೊಟ್ಟು ಪ್ರವೇಶ ಪತ್ರವನ್ನು ಮೇ 31ರ ಶನಿವಾರದೊಳಗೆ ಪಡೆಯಬಹುದು.

ADVERTISEMENT

ಮಾಹಿತಿಗಾಗಿ ರಾಯಚೂರು ಮೊ.ಸಂ. 97310 28420, ಮಾನ್ವಿ, ಸಿರವಾರ ಮೊ.ಸಂ. 88673 34785, ದೇವದುರ್ಗ ಮೊ.ಸಂ. 88841 49056, ಲಿಂಗಸುಗೂರು, ಮಸ್ಕಿ ಮತ್ತು ಸಿಂಧನೂರು ಮೊ.ಸಂ. 97408 71306, 82176 21732 ಹಾಗೂ 88849 77468ಗೆ ಸಂಪರ್ಕಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.