ADVERTISEMENT

ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಡಾ.ಕಟ್ಟಿಮನಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 14:01 IST
Last Updated 15 ಸೆಪ್ಟೆಂಬರ್ 2021, 14:01 IST
ರಾಯಚೂರಿನ ಕನ್ನಡ ಭವನದಲ್ಲಿ ಬುಧವಾರ ಹತ್ತು ದಿನಗಳ ಉದ್ಯಮಶೀಲತಾ ಕಾರ್ಯಕಾರಿ ಸಮಾರೋಪ ಸಮಾರಂಭದಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಕೆ.ಎನ್. ಕಟ್ಟಿಮನಿ ಮಾತನಾಡಿದರು
ರಾಯಚೂರಿನ ಕನ್ನಡ ಭವನದಲ್ಲಿ ಬುಧವಾರ ಹತ್ತು ದಿನಗಳ ಉದ್ಯಮಶೀಲತಾ ಕಾರ್ಯಕಾರಿ ಸಮಾರೋಪ ಸಮಾರಂಭದಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಕೆ.ಎನ್. ಕಟ್ಟಿಮನಿ ಮಾತನಾಡಿದರು   

ರಾಯಚೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದುಪಯೋಗ ಪಡೆದು ಬೃಹತ್ ಮಟ್ಟದ ಉದ್ಯಮಶೀಲರಾಗುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಕೆ.ಎನ್. ಕಟ್ಟಿಮನಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಇಲಾಖೆಯಿಂದ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಕಾರ್ಯಕಾರಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕೃಷಿ-ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯ ಹಲವು ಸಂಶೋಧನೆಗಳನ್ನು ನಡೆಸಿ ಯಶಸ್ವಿಗೊಂಡಿದೆ. ಉದ್ಯಮಶೀಲತೆ ತರಬೇತಿದಾರರಿಗೆ ನಮ್ಮ ವಿಶ್ವವಿದ್ಯಾಲಯದ ಆವಿಷ್ಕಾರಗಳು ಸಹಾಯವಾಗಲಿದೆ ಎಂದರು.

ADVERTISEMENT

ಜಿಲ್ಲಾ ಕೈಗಾರಿಕಾ ತರಬೇತಿ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ ಮಾತನಾಡಿ, ಕೈಗಾರಿಕೆ ಮತ್ತು ಉದ್ಯಮ ಆರಂಭಕ್ಕೆ ತರಬೇತಿ ಅತ್ಯಂತ ಮುಖ್ಯವಾಗಿದೆ. ತರಬೇತಿ ಪಡೆದವರು ಉದ್ಯಮಿದಾರರು ಕಾನೂನು ಚೌಕಟ್ಟಿನಲ್ಲಿ ಲಾಭಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ್, ಜಿಲ್ಲಾ ಅಗ್ರ ಶ್ರೇಣಿಯ ಬ್ಯಾಂಕ್ ಮುಖ್ಯಸ್ಥ ಬಾಬು ಬಳಗಾನೂರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಜೇಶ್ ಬಾವಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.