ರಾಯಚೂರು: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಈಶ್ವರಕುಮಾರ ಕಂಡೂ ಅವರನ್ನು ಸರ್ಕಾರ ನಿಯೋಜಿಸಿದೆ.
2018ರ ಬ್ಯಾಚ್‌ನ ಈಶ್ವರಕುಮಾರ ಅವರು ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದಾರೆ.
ರೂರ್ಕೆಲಾ ಸ್ಟೀಲ್ ಪ್ಲಾಂಟ್‌ನಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಇನ್ಸ್ಟ್ರುಮೆಂಟೇಶನ್ ವಿಭಾಗದಲ್ಲಿ ಜೂನಿಯರ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾಗ ಈಶ್ವರಕುಮಾರ ಅವರು ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಫಲಿತಾಂಶದಲ್ಲಿ 187ನೇ ಸ್ಥಾನ ಗಳಿಸಿದ್ದರು.
ಸಿಇಒ ರಾಹುಲ್ ಪಾಂಡ್ವೆ ಅವರನ್ನು ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.