ADVERTISEMENT

ರಾಯಚೂರು: ಅಗತ್ಯವಸ್ತುಗಳ ಮಳಿಗೆಗಳು ಮಾತ್ರ ಓಪನ್ 

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 7:25 IST
Last Updated 22 ಏಪ್ರಿಲ್ 2021, 7:25 IST
   

ರಾಯಚೂರು: ನಗರದಲ್ಲಿ ಅಗತ್ಯ ವಸ್ತು ಮಾರಾಟದ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದವುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.

ಕೆಲವು‌ ಮಳಿಗೆಗಳ‌ ಮಾಲೀಕರು ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದು, ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ‌ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ರಾಯಚೂರು ನಗರದಲ್ಲಿಯೇ ಕೊರೊನಾ ಸೋಂಕು ವೇಗವಾಗಿ ಹರಡಿಕೊಳ್ಳುತ್ತಿರುವುದರಿಂದ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ.

ಜಿಲ್ಲೆಯ ಇತರೆ ತಾಲ್ಲೂಕು ಕೇಂದ್ರಗಳಾದಸಿಂಧನೂರು, ಲಿಂಗಸುಗೂರು, ಮಾನ್ವಿ, ದೇವದುರ್ಗ, ಸಿರವಾರ ಹಾಗೂ ಮಸ್ಕಿಯಲ್ಲಿ ಎಂದಿನಂತೆ ವ್ಯಾಪಾರ ಮಳಿಗೆಗೆ ಅವಕಾಶ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆ ಬಳಿಕ ಬಂದ್ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.

ADVERTISEMENT

ರಾಯಚೂರು ಜಿಲ್ಲೆಯಲ್ಲಿ ಗುರುವಾರ ಒಂದೇ ‌ದಿನ‌ 500 ಕ್ಕೂ ಹೆಚ್ಚು ಜನರಿಗೆ ಕೋವಿಡ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.