ಲಿಂಗಸುಗೂರು: ನಾರಾಯಣಪುರ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಆದ್ದರಿಂದ ಕೃಷ್ಣೆ ದಿನದಿಂದ ದಿನಕ್ಕೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಆರೋಗ್ಯ ಇಲಾಖೆ ತುಂಬು ಗರ್ಭಿಣಿಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುತ್ತಿದ್ದಾರೆ.
ಗುರುವಾರ ಒಬ್ಬರು, ಶುಕ್ರವಾರ ಇಬ್ಬರು ಹಾಗೂ ಶನಿವಾರ ಒಬ್ಬರನ್ನು ಗರ್ಭಿಣಿಯನ್ನು ಆಂಬುಲೆನ್ಸ್ ಮೂಲಕ ಈಚನಾಳ ಮತ್ತು ಲಿಂಗಸುಗೂರಿನ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಾಲ್ವರು ಗರ್ಭಿಣಿಯರು ಸ್ವಂತ ವಾಹನಗಳಲ್ಲಿ ಸಂಬಂಧಿಗಳ ಮನೆಗೆ ತೆರಳಿದ್ದಾರೆ. ಇನ್ನೂ ಆರು ಜನ ಮಾತ್ರ ಉಳಿದಿದ್ದಾರೆ.
‘ಆಂಬುಲೆನ್ಸ್ ಸಹಿತ ವೈದ್ಯರು, ಆರೋಗ್ಯ ಸಹಾಯಕರು ನಿತ್ಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ನಡುಗಡ್ಡೆ ಗ್ರಾಮಸ್ಥರ ಆರೋಗ್ಯ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ತಿಳಿಸಿದರು.
ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಕುಲಕರ್ಣಿ, ಆರೋಗ್ಯ ಸಹಾಯಕರಾದ ಸಿದ್ದಲಿಂಗಪ್ಪ, ಪ್ರತಾಪ, ಶಿವಕುಮಾರ, ಅಲಿ, ಹುಲಿಗೆಮ್ಮ, ರಾಧಾ, ಜಗದೀಶ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.