ADVERTISEMENT

ಜಾಲಹಳ್ಳಿ: ಮೊರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 8:24 IST
Last Updated 3 ಆಗಸ್ಟ್ 2025, 8:24 IST
ಜಾಲಹಳ್ಳಿ ಪಟ್ಟಣದ ಹೊರಟಿಗೇರಿ ಸರ್ಕಾರಿ ಶಾಲೆಯಲ್ಲಿ‌ ಗುರುವಾರ ಹಮ್ಮಿಕೊಂಡ ವಲಯ ಮಟ್ಟಣದ ಕ್ರೀಡಾಕೂಟದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಬಹುತೇಕ ಪ್ರಥಮ ಪ್ರಶಸ್ತಿ  ಪಡೆದುಕೊಂಡಿದ್ದಾರೆ
ಜಾಲಹಳ್ಳಿ ಪಟ್ಟಣದ ಹೊರಟಿಗೇರಿ ಸರ್ಕಾರಿ ಶಾಲೆಯಲ್ಲಿ‌ ಗುರುವಾರ ಹಮ್ಮಿಕೊಂಡ ವಲಯ ಮಟ್ಟಣದ ಕ್ರೀಡಾಕೂಟದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಬಹುತೇಕ ಪ್ರಥಮ ಪ್ರಶಸ್ತಿ  ಪಡೆದುಕೊಂಡಿದ್ದಾರೆ   

ಜಾಲಹಳ್ಳಿ: ಇಲ್ಲಿನ ಹೊರಟಿಗೇರಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ಗುರುವಾರ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 

ಥ್ರೋ ಬಾಲ್, ವಾಲಿಬಾಲ್, 4100 ರೀಲೆ, ಚಕ್ರ ಎಸೆತ, 400 ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತಗಳಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದಿದ್ದಾರೆ. 

ಬಾಲಕಿಯರು ಥೋ ಬಾಲ್, 4100 ರೀಲೆ, ಚಕ್ರ ಎಸೆತ, 600 ಮೀಟರ್ ಓಟ, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದ ಉತ್ತಮ ಸಾಧನೆ ಮಾಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಾಂಶುಪಾಲ ಸೋಮಶೇಖರ ಪಾಟೀಲ್, ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.