ADVERTISEMENT

ಕೋವಿಡ್ ಮೂರನೇ ಅಲೆ ಭೀತಿ: ಜಾತ್ರೆ, ಮೆರವಣಿಗೆ ರದ್ದು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 16:34 IST
Last Updated 8 ಆಗಸ್ಟ್ 2021, 16:34 IST

ರಾಯಚೂರು: ಕೋವಿಡ್ ಭೀತಿ ಕಾರಣ ಜಿಲ್ಲೆಯಲ್ಲಿ ಜಾತ್ರೆ, ಮೊಹರಂ ಮೆರವಣಿಗೆಗಳನ್ನು ನಿಷೇಧಿಸಲಾಗಿದ್ದು, ಮಂದಿರ, ಮಸೀದಿ, ಚರ್ಚ್, ಗುರುದ್ವಾರ, ಇತರ ಧಾರ್ಮಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಿ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಎಚ್ಚರಿಸಿದ್ದಾರೆ.

‘ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ’:

ADVERTISEMENT

ಮಸ್ಕಿ: ಕೊವಿಡ್ ಕಾರಣ ತಾಲ್ಲೂಕಿನಾದ್ಯಂತ ಜಾತ್ರೆ, ಮೊಹರಂ, ಉರುಸ್, ಮೆರವಣೆಗೆಗಳಿಗೆ ನಿರ್ಬಂಧಿಸಲಾಗಿದೆ ಎಂದು ತಹಶೀಲ್ದಾರ್ ಕವಿತಾ ಆರ್. ತಿಳಿಸಿದ್ದಾರೆ.

ಮಸೀದಿ, ಚರ್ಚ್, ದೇವಸ್ಥಾನ, ಗುರುದ್ವಾರ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಕೊವಿಡ್ ನಿಯಮ ಪಾಲನೆಯೊಂದಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ. ದೇವಸ್ಥಾನ ಗಳಲ್ಲಿ ಮಾಸ್ಕ್, ಸಾನಿಟೈಸರ್ ಹಾಗೂ ಪರಸ್ಪರ ಅಂತರ ಕಾಪಾಡಿಕೊಳ್ಳತಕ್ಕದ್ದು. ಕೊವಿಡ್ ಮಾರ್ಗಸೂಚಿ ಉಲ್ಲಂಘಣೆ ಕಂಡು ಬಂದರೆ ಅಂತವರ ವಿರುದ್ಧ ವಿಪತ್ತು ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.