ADVERTISEMENT

ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸುಳ್ಳು ಆರೋಪ: ದೂರು

​ಪ್ರಜಾವಾಣಿ ವಾರ್ತೆ
Published 28 ಮೇ 2022, 12:31 IST
Last Updated 28 ಮೇ 2022, 12:31 IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು   

ರಾಯಚೂರು: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮಾಧ್ಯಮದ ಮೂಲಕ ಸುಳ್ಳು ಆರೋಪ ಮಾಡಿ ತೇಜೋವಧೆ ಮಾಡಿದವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ರಾಜ್ಯದಲ್ಲಿ ಸಾರಿಗೆ ನೌಕರರ ಹೋರಾಟದಲ್ಲಿ ಬಾಗಿಯಾಗಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರು ಸಾರಿಗೆ ನೌಕರರ ಹೋರಾಟಕ್ಕೆ ಸ್ಪಂದಿಸಿದ್ದರು. ಆದರೆ ಸರ್ಕಾರ ಜನಪ್ರತಿನಿಧಿಗಳ ಸಂದಿಸಿಲ್ಲ. ಟಿವಿ ಚಾನಲ್ ಮುಂದಿಟ್ಟುಕೊಂಡು ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಪರ್ಯಾಯ ರಾಜಕಾರಣಕ್ಕೆ ಮುಂದಾಗಿದ್ದು , ಆಮ್ ಆದ್ಮಿ ಪಾರ್ಟಿ ಜೊತೆಗೆ ಹೋಗಿದ್ದೇವೆ. ರಾಜ್ಯದಲ್ಲಿ ಸಮಾವೇಶ ನಡೆಸಿದ್ದೇವೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಆದರೆ ಇದನ್ನು ಸಹಿಸದ ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ₹ 30 ಕೋಟಿ ಡೀಲ್ ಆಗಿದೆ ಎಂದು ಸುಳ್ಳು ವಿಡಿಯೊ ಮಾಡಿಸಿ ಹರಿಬಿಟ್ಟಿದ್ದಾರೆ ಎಂದು ದೂರುದರು.

ADVERTISEMENT

ಹಣ ಯಾರು ನೀಡಿದರು ಎಷ್ಟು, ನಗದು, ಚೆಕ್ ಮೂಲಕ ನೀಡಿದ್ದಾರೆ ಎಂಬುದು ಸ್ಪಷ್ಟಪಡಿಸಬೇಕಾಗಿದೆ. ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದು, ಸುದ್ದಿ ಪ್ರಸಾರ ಮಾಡಿದ ಚಾನಲ್ ರದ್ದು ಪಡಿಸಬೇಕು. ಆರೋಪಿಗಳಿಗೆ ಶಿಕ್ಷೆಯಾಗಬೇಕು. ಒಂದು ವಾರದಲ್ಲಿ ಕ್ರಮ ಜರುಗಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ, ಉಮಾದೇವಿ ನಾಯಕ್‌, ರಾಮಯ್ಯ ಜವಳಗೇರಾ, ರಾಮಬಾಬು, ಮಾನಯ್ಯ ಅಂಕುಶದೊಡ್ಡಿ, ನಿರುಪಾದಿ, ಗೋವರ್ಧನ ರೆಡ್ಡಿ, ಮಹಾದೇವ ಏಗನೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.