ADVERTISEMENT

ಚಿನ್ನದ ಪದಕ ಪಡೆದ ಫರೀನ್‌ ಬೇಗಂ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 13:59 IST
Last Updated 21 ಮಾರ್ಚ್ 2019, 13:59 IST
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಘಟಿಕೋತ್ಸವದಲ್ಲಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಫರೀನ್‌ ಬೇಗಂ ಅವರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಘಟಿಕೋತ್ಸವದಲ್ಲಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಫರೀನ್‌ ಬೇಗಂ ಅವರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು   

ರಾಯಚೂರು:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಫರೀನ್ ಬೇಗಂ ಹಾಜಿ ಶೇಕ್ ಅವರು 2018 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಎಂ.ಎಸ್ಸಿ ಗಣಿತಶಾಸ್ತ್ರ ವಿಭಾಗದಲ್ಲಿ ಕಂಪ್ಯೂಟೇಷನಲ್‌ ನ್ಯುಮರಿಕಲ್‌ ಮೆಥೆಡ್‌ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವುದಕ್ಕಾಗಿ ಚಿನ್ನದ ಪದಕ ಗೌರವಕ್ಕೆ ಭಾಜನರಾದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ 37 ನೇ ಘಟಿಕೋತ್ಸವದಲ್ಲಿ ಕುಲಪತಿಗಳು ವಿದ್ಯಾರ್ಥಿನಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಿದರು. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಎಲ್ಲ ಪ್ರಾಧ್ಯಾಪಕರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT