ADVERTISEMENT

ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಉಪವಾಸ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 14:20 IST
Last Updated 30 ಜನವರಿ 2021, 14:20 IST
ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿರುವ  ಮಹಾತ್ಮಾಗಾಂಧಿ ಪುತ್ಥಳಿ ಬಳಿ ಉಪವಾಸ ಸತ್ಯಾಗ್ರಹ ನಡೆಸಿದರು
ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿರುವ  ಮಹಾತ್ಮಾಗಾಂಧಿ ಪುತ್ಥಳಿ ಬಳಿ ಉಪವಾಸ ಸತ್ಯಾಗ್ರಹ ನಡೆಸಿದರು   

ರಾಯಚೂರು: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಬೇಕು ಹಾಗೂ ದೆಹಲಿಯಲ್ಲಿ ಶಾಂತಿಯುತ ಪರೇಡ್ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನಗರದ ಜಿಲ್ಲಾ ಕ್ರೀಡಾಂಗಣದ ಬಳಿಯ ಮಹಾತ್ಮಗಾಂಧಿ ಪುತ್ಥಳಿ ಎದುರು ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶನಿವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಎರಡು ತಿಂಗಳಿಂದ ದೇಶದಾದ್ಯಂತ ರೈತರು ಹೋರಾಟ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲು ಮುಂದಾಗುತ್ತಿಲ್ಲ ಎಂದು ದೂರಿದರು.

ಕೇಂದ್ರ ಸರ್ಕಾರ ತನ್ನ ಸರ್ವಾಧಿಕಾರ ಪ್ರದರ್ಶನ ಮಾಡುತ್ತಿದ್ದು ಇದರಿಂದಾಗಿ 60ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ರೈತರ ಬೇಡಿಕೆ ಈಡೇರಿಸುವ ಬದಲಾಗಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಜನವರಿ 26ರಂದು ಹೋರಾಟ ನಿರತ ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಗಿದೆ. ಸರ್ಕಾರದ ದೌರ್ಜನ್ಯ, ದಬ್ಬಾಳಿಕೆಗೆ ಹೆದರದೇ ರೈತರು ಮತ್ತಷ್ಟು ಉಗ್ರ ಸ್ವರೂಪದಲ್ಲಿ ಹೋರಾಟ ಮುಂದುವರೆಸಲು ನಿರ್ಧಾರಿಸಿದ್ದಾರೆ. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೂ ಹೋರಾಟ ನಡೆಯುತ್ತದೆ. ಯಾವುದೇ ಕಾರಣಕ್ಕೂ ರೈತರು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಸಮಿತಿಯ ಸಂಚಾಲಕ ಕೆ.ಜಿ ವೀರೇಶ,ಶರಣಪ್ಪ ಮರಳಿ, ರಾಮಬಾಬು, ಮಾರೆಪ್ಪ ಹರವಿ, ಬಸವರಾಜ ಗಾರಲದಿನ್ನಿ, ಮಾರೆಪ್ಪ ವಕೀಲ, ಜಿಂದಪ್ಪ, ಡಿ.ಎಸ್ ಶರಣಬಸವ, ನರಸಪ್ಪ, ಚನ್ನಬಸವ ಜಾನೇಕಲ್, ಶ್ರೀನಿವಾಸ ಕಲವಲದೊಡ್ಡಿ, ದೇವರಾಜ ನಾಯಕ, ಶರಣಪ್ಪ ದಿನ್ನಿ, ಎಂ.ಆರ್.ಬೇರಿ, ಮಹಾದೇವ ಏಗನೂರು, ನಾಗೇಂದ್ರಪ್ಪ, ಗಂಗಪ್ಪ, ಚೆನ್ನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.