ADVERTISEMENT

ರಾಯಚೂರು| ಪವನ ವಿದ್ಯುತ್ ಕಂಪೆನಿಗಳಿಂದ ರೈತರಿಗೆ ಮೋಸ

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 14:17 IST
Last Updated 22 ಜನವರಿ 2020, 14:17 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು   

ರಾಯಚೂರು: ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ರೈತರ ಜಮೀನುಗಳನ್ನು ಬಾಡಿಗೆ ಪಡೆದ ಖಾಸಗಿ ಕಂಪನಿಯೂ ಪವನ ವಿದ್ಯುತ್ ಘಟಕಗಳನ್ನು ಸ್ಥಾಪಿಸಿ, ರೈತರಿಗೆ ಬಾಡಿಗೆ ಹಣ ನೀಡದೇ ವಂಚಿಸಿದ್ದಾರೆ. ಕೂಡಲೇ ರೈತರಿಗೆ ನ್ಯಾಯ ಒದಗಿಸಬೇಕು ಎಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ಹೈದರಾಬಾದ್ ಮೂಲದ ಗಮೇಶ ಸಂಸ್ಥೆಯು ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಒಟ್ಟು 27 ಕಡೆಗಳಲ್ಲಿ ಪವನ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಆದರೆ, ರೈತರೊಂದಿಗೆ ಮಾಡಿಕೊಂಡ ಒಪ್ಪಂದ ಪ್ರಕಾರ ಹಣ ಪಾವತಿ ಮಾಡಿಲ್ಲ ಎಂದು ದೂರಿದರು.

ಈ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರಿಗೆ ನ್ಯಾಯದೊರಕಿಲ್ಲ. ಪವನ್ ವಿದ್ಯುತ್ ಘಟಕ ಸ್ಥಾಪನೆ ಮಾಡಿದ ಕಂಪೆನಿಯಿಂದ ರೈತರಿಗೆ ಆಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಿ ರೈತರಿಗೆ ಬರಬೇಕಾದ ಹಣವನ್ನು ಕೊಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘದ ಜಿಲ್ಲಾಧ್ಯಕ್ಷ ವಾಸುದೇವ ಮೇಟಿ, ಶಿವಪ್ಪ ಆಲ್ಕೂರು, ನರಸಪ್ಪ, ಮಹೇಶ, ಶರಣಪ್ಪ, ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.