ರಾಯಚೂರು: ಬೆಳೆ ವಿಮೆ ಪರಿಹಾರ, ಮಳೆ ಹಾನಿ ಪರಿಹಾರ ನೀಡದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಶುಕ್ರವಾರ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ರವಾನಿಸುವ ವಿನೂತನ ಪ್ರತಿಭಟನೆ ನಡೆಸಿದರು.
ನಗರದ ತೀನ್ ಖಂದಿಲ್ ವೃತ್ತದಲ್ಲಿ ರೈತ ಸಂಘದ ಮುಖಂಡರು ಜೋಳಿಗೆ ಹಿಡಿದು ರಸ್ತೆ ಬದಿಯ ಅಂಗಡಿಗಳಿಗೆ ತೆರಳಿ ಭಿಕ್ಷೆ ಬೇಡಿದರು.
ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟಿಲ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಆದರೆ ಸರ್ಕಾರ ಪರಿಹಾರ ನೀಡಿಲ್ಲ, ಕಳೆದ ಸೆಪ್ಟೆಂಬರ್ ತಿಂಗಳಿಂದ ನಿರಂತರವಾಗಿ ಮಳೆಯಿಂದಾಗಿ ಬೆಳೆಗಳು ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ದಿವಾಳಿ ಎದ್ದಿವೆ. ಪರಿಹಾರ ಧನ ನೀಡದೇ ಚೆಲ್ಲಾಟವಾಡುತ್ತಿವೆ. ಕೂಡಲೇ ಎಚ್ಚೆತ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಸುಗೂರಯ್ಯ ಸ್ವಾಮಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.