ADVERTISEMENT

ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 13:56 IST
Last Updated 30 ಜೂನ್ 2020, 13:56 IST
ರಾಯಚೂರು ತಾಲ್ಲೂಕಿನ ಗುಂಜಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು
ರಾಯಚೂರು ತಾಲ್ಲೂಕಿನ ಗುಂಜಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು   

ರಾಯಚೂರು: ರೈತರ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗುವ ಎಪಿಎಂಸಿ, ಭೂ ಸುಧಾರಣಾ ಕಾಯ್ದೆ, ಬೀಜ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಗುಂಜಹಳ್ಳಿ, ಇಡಪನೂರು, ಗಿಲ್ಲೆಸುಗೂರು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಕಚೇರಿ ಎದುರು ಸೋಮವಾರ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ (ಎಐಕೆಎಸ್ಸಿಸಿ) ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಪಿಡಿಓ ಮೂಲಕ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಕೊರೊನಾದಿಂದ ದೇಶದ ರೈತರು, ಕಾರ್ಮಿಕರು ಜನ ಸಾಮಾನ್ಯರು ತತ್ತರಿಸಿದ್ದು, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎಪಿಎಂಸಿ, ಭೂ ಸುಧಾರಣಾ, ವಿದ್ಯುತ್, ಬೀಜ ತಿದ್ದುಪಡಿ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು ಸರ್ವಾಧಿಕಾರ ಧೊರಣೆಯಾಗಿದೆ ಎಂದು ದೂರಿದರು.

ಮುಖಂಡರಾದ ಕೆ.ಜಿ.ವೀರೇಶ, ಉಮಾದೇವಿ ನಾಯಕ, ರಂಗನಗೌಡ, ಮಾರೆಪ್ಪ ಹರವಿ, ಬಸವರಾಜ, ರವಿಕುಮಾರ, ಮಲ್ಲಿಕಾರ್ಜುನ ರೆಡ್ಡಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.