ADVERTISEMENT

ರೈತವಿರೋಧಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 16:09 IST
Last Updated 18 ಮಾರ್ಚ್ 2021, 16:09 IST
ರಾಯಚೂರಿನ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ಹೋರಾಟದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು
ರಾಯಚೂರಿನ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ಹೋರಾಟದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು   

ರಾಯಚೂರು: ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿ ನಗರದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ಹೋರಾಟದ ಬಿತ್ತಿಪತ್ರಗಳ ಬಿಡುಗಡೆಗೊಳಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಕೃಷಿ ಭೂಮಿಯನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಒಪ್ಪಿಸುವ ರಾಜ್ಯ ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕು. ರೈತ ವಿರೋಧಿ ಜಾನುವಾರು ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ರದ್ದುಪಡಿಸಬೇಕು. ಉದ್ಯೋಗ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ನೆರವು ಘೋಷಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್ ಸ್ವಾಮಿನಾಥನ್ ಶಿಫಾರಸು ಅನ್ವಯ ಉತ್ಪಾದನಾ ವೆಚ್ಚದ ಮೇಲೆ ಶೇ 50ರಷ್ಟಯ ಲಾಭಾಂಶ ಸೇರಿಸಿ ಕನಿಷ್ಠ ಬೆಂಬಲ ಬೆಲೆ ಎಂಎಸ್‍ಪಿ ಖಾತರಿ ಮಾಡುವ ಕಾನೂನನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಂಗೀಕರಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಂಘಟನೆ ಮುಖಂಡರಾದ ಮಾರೆಪ್ಪ ಹರವಿ, ರಾಮಬಾಬು, ಭಾರದ್ವಾಜ, ಬಸವರಾಜ ಗಾರಲದಿನ್ನಿ, ನರಸಪ್ಪ, ಗುರುರಾಜ್, ಶ್ರೀನಿವಾಸ ಕೊಪ್ಪರ, ಕೆ.ತಿಮ್ಮಪ್ಪ, ಆಂಜನೇಯ, ವಿರುಪಮ್ಮ, ವಿಷ್ಣುವರ್ಧನರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.