
ಪ್ರಜಾವಾಣಿ ವಾರ್ತೆ
ಸಿಂಧನೂರು: ನಗರದ ವಾರ್ಡ್ ನಂ.14ರ ನಿವಾಸಿ, ವೀರಶೈವ ಸಮಾಜದ ಮುಖಂಡ ಶರಣಯ್ಯ ಸ್ವಾಮಿ ಶಾಸ್ತ್ರಿಮಠ ಕಂದಗಲ್ (47) ಅವರು ಮಗನ ಮದುವೆ ದಿನದಂದೇ ಹೃದಯಘಾತದಿಂದ ನಿಧನರಾಗಿದ್ದಾರೆ.
ಲಕ್ಷ್ಮಿದೇವಿ–ಶರಣಯ್ಯ ಶಾಸ್ತ್ರಿಮಠ ಕಂದಗಲ್ ಅವರ ಸುಪುತ್ರನ ಮದುವೆ ನ.30ರಂದು ಸಿಂಧನೂರಿನ ಜೈನ ಕಲ್ಯಾಣ ಮಂಟಪದಲ್ಲಿ ನೆರವೇರಿಸಲು ಹಿರಿಯರು ನಿಶ್ಚಯಿಸಿದ್ದರು. ಭಾನುವಾರ ಬೆಳಗಿನ ಜಾವ 3 ಗಂಟೆಗೆ ರಕ್ತದೊತ್ತಡ ಕಡಿಮೆ ಆಗಿರುವುದರಿಂದ ಮನೆಯವರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಸಂಜೆ ನಗರದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.