ಮಾನ್ವಿಯಲ್ಲಿ ಮಂಗಳವಾರ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಗುರುನಾಥ ಅವರಿಗೆ ಮನವಿ ಸಲ್ಲಿಸಿದರು.
ಮಾನ್ವಿ: ಅಧಿಕ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿರುವ ವರ್ತಕರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಗುರುನಾಥ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳ ರಸಗೊಬ್ಬರ ಮಾರಟಗಾರರು ತಮ್ಮಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರವನ್ನು ಸಂಗ್ರಹಿಸಿಟ್ಟುಕೊಂಡು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವ ಮೂಲಕ ರೈತರಿಗೆ ಮಾರುಕಟ್ಟೆ ದರಕ್ಕಿಂತ ಅತಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. ರೈತರಿಗೆ ಡಿಎಪಿ ಯೂರಿಯಾ ಜತೆಗೆ ಅಗತ್ಯವಿಲ್ಲದೆ ಇದ್ದರೂ ಕೂಡ ಜಿಂಕ್ ಪೋಷಕಾಂಶ ಖರೀದಿಗೆ ಒತ್ತಾಯಿಸುತ್ತಿದ್ದಾರೆ. ಇದ್ದರಿಂದ ರೈತರಿಗೆ ಹೆಚ್ಚಿನ ಹೊರೆಯಾಗುತ್ತಿದೆ ಹಾಗೂ ಕೃಷಿ ವೆಚ್ಚದಲ್ಲಿ ಗಣನಿಯವಾಗಿ ಹೆಚ್ಚಳವಾಗಲಿದೆ ಎಂದು ಅವರು ತಿಳಿಸಿದರು.
ಕಾರಣ ಎಲ್ಲಾ ರಸಗೊಬ್ಬರ ಮಾರಾಟ ಅಂಗಡಿಗಳಲ್ಲಿ ದರಪಟ್ಟಿ ಹಾಗೂ ದಾಸ್ತನು ಪಟ್ಟಿ ಹಾಕುವಂತೆ ಸೂಚನೆ ನೀಡಬೇಕು. ಅಂಗಡಿಗಳಲ್ಲಿ ರೈತರಿಗೆ ಸುಲಭವಾಗಿ ರಸಗೊಬ್ಬರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಕಾಶೀನಾಥ್ ಕುರ್ಡಿ, ಇತರ ಪದಾಧಿಕಾರಿಗಳಾದ
ತಿಪ್ಪಣ್ಣ ಜಾನೆಕಲ್, ಬುಡ್ಡಪ್ಪ ಕರೇಗುಡ್ಡ, ನರಸರೆಡ್ಡಿ, ನರಸಿಂಹ ಸೀಕಲ್, ರಮೇಶ ನಾಯಕ್,ಶರಣು ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.