ಕವಿತಾಳ: ಸಮೀಪದ ತೋರಣದಿನ್ನಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ಶನಿವಾರ ಬೆಳಿಗ್ಗೆ 6 ತಿಂಗಳ ಭ್ರೂಣ ಪತ್ತೆಯಾಗಿದೆ.
ರಸ್ತೆಯಲ್ಲಿ ಬಿದ್ದಿದ್ದ ಭ್ರೂಣ ಗಮನಿಸಿದ ಸಾರ್ವಜನಿಕರು ಆಶಾ ಕಾರ್ಯಕರ್ತೆ ಹಾಗೂ ವೈದ್ಯರಿಗೆ ಮಾಹಿತಿ ನೀಡಿದ್ದಾರೆ.
ಭ್ರೂಣ ಪರಿಶೀಲಿಸಿದ ವೈದ್ಯಾಧಿಕಾರಿ ಡಾ.ಪಿ.ಬಿ.ಸಿಂಗ್,‘6 ತಿಂಗಳ ಗಂಡು ಮಗುವಿನ ಭ್ರೂಣ ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ ಗರ್ಭಪಾತ ನಡೆದಿಲ್ಲ. ಊರಲ್ಲಿನ ಗರ್ಭಿಣಿಯರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ’ ಎಂದು ತಿಳಿಸಿದರು.
ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.