ADVERTISEMENT

ಗೃಹಲಕ್ಷ್ಮಿ: ಹಣ ಪಡೆದರೆ ಕ್ರಿಮಿನಲ್ ಪ್ರಕರಣ ದಾಖಲು

ಗ್ರಾಮ ಒನ್ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2023, 14:11 IST
Last Updated 25 ಜುಲೈ 2023, 14:11 IST
   

ರಾಯಚೂರು: ಗ್ರಾಮ ಒನ್ ಕೇಂದ್ರಗಳಲ್ಲಿಗೃಹಲಕ್ಷ್ಮಿ ಅರ್ಜಿ ಸಲ್ಲಿಸುತ್ತಿರುವ ಮಹಿಳೆಯರಿಂದ ಹಣ ಪಡೆದರೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು ಮಾಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ದುರ್ಗೇಶ್ ಎಚ್ಚರಿಸಿದ್ದಾರೆ.

ಜಿಲ್ಲೆಯ ಸಿರವಾರ ತಾಲ್ಲೂಕಿನ ವ್ಯಾಪ್ತಿಯ ಬಾಗಲವಾಡ ಗ್ರಾಮ ಪಂಚಾಯಿತಿಯ ಗ್ರಾಮ ಒನ್ ಕೇಂದ್ರದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಉಚಿತವಾಗಿ ಸೇವೆಯನ್ನು ನೀಡಬೇಕೆಂದು ಸೂಚಿಸಿದ್ದರೂ ಹಣ ವಸೂಲಿ ಮಾಡುತ್ತಿರುವ ದೂರಗಳು ಬಂದಿವೆ. ಈ ಗ್ರಾಮ ಒನ್ ಸೇವಾ ಕೇಂದ್ರದ ಐಡಿಯನ್ನು ನಿಷ್ಕ್ರಿಯ  ಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬಾಗಲವಾಡ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಪರೇಟರ್‌ಗಳಾದ ಪಾಷಾ ಹಾಗೂ ಸುನೀಲ್ ಕಂಬಲೆತ್ತಿ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿರುವುದು ಕಂಡು ಬಂದಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.