ADVERTISEMENT

ಜೋಳದ ರಾಶಿಗೆ ಬೆಂಕಿ: ₹ 4.5 ಲಕ್ಷ ಬೆಳೆ ಹಾನಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 6:47 IST
Last Updated 2 ಫೆಬ್ರುವರಿ 2023, 6:47 IST
ಮಾನ್ವಿ ತಾಲ್ಲೂಕಿನ ಖರಾಬದಿನ್ನಿ ಗ್ರಾಮದಲ್ಲಿ ಬೆಂಕಿಗೆ ಆಹುತಿಯಾದ ಜೋಳದ ರಾಶಿ
ಮಾನ್ವಿ ತಾಲ್ಲೂಕಿನ ಖರಾಬದಿನ್ನಿ ಗ್ರಾಮದಲ್ಲಿ ಬೆಂಕಿಗೆ ಆಹುತಿಯಾದ ಜೋಳದ ರಾಶಿ   

ಮಾನ್ವಿ: ತಾಲ್ಲೂಕಿನ ಖರಾಬದಿನ್ನಿ ಗ್ರಾಮದಲ್ಲಿ ದುಷ್ಕರ್ಮಿಗಳು ಜೋಳದ ರಾಶಿಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಹನುಮಂತಮ್ಮ ಎಂಬ ರೈತರಿಗೆ ಸೇರಿದ ಸರ್ವೆ ನಂ68/2 ರ 7ಎಕರೆ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ರಾಶಿಗೆ ಬೆಂಕಿ ಹಚ್ಚಲಾಗಿದೆ. ಸುಮಾರು ₹ 4.5 ಲಕ್ಷ ಮೌಲ್ಯದ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಗ್ರಾಮ ಲೆಕ್ಕಾಧಿಕಾರಿ ನರಸಪ್ಪ ಹಾಗೂ ಸುರೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT