
ಸಿಂಧನೂರು: ತಾಲ್ಲೂಕಿನ ವಳಬಳ್ಳಾರಿ ಗ್ರಾಮದ ಲಿಂಗೈಕ್ಯ ಚನ್ನಬಸವ ಮಹಾಶಿವಯೋಗಿಗಳ 43ನೇ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಸಂಜೆ ನೂರಾರು ಮಹಿಳೆಯರು, ಹೂವಿನ ಲಘು ರಥವನ್ನು ಶ್ರದ್ಧಾಭಕ್ತಿಯಿಂದ ಎಳೆದರು.
ಶ್ರೀಮಠದ ಸಿದ್ದಲಿಂಗ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ಕಳಸಾರೋಹಣ ಮತ್ತು ಪಲ್ಲಕ್ಕಿ ಉತ್ಸವಕ್ಕೆ ಪೂಜೆ ಸಲ್ಲಿಸುವ ಮೂಲಕ ಹೂವಿನ ಲಘ ರಥೋತ್ಸವಕ್ಕೆ ಚಾಲನೆ ನೀಡಿದರು. ಮಹಿಳೆಯರು ರಥ ಎಳೆಯುತ್ತಿದ್ದಂತೆ ಸಾವಿರಾರು ಜನರು ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.
ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ಮಾಜಿ ಸಚಿವ ಬಸವರಾಜ ಪಾಟೀಲ ಆನ್ವರಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ಚಂದ್ರಶೇಖರಯ್ಯ ಸಿರಗುಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ, ಮುಖಂಡರಾದ ಸತ್ಯನಗೌಡ ವಳಬಳ್ಳಾರಿ, ವೀರನಗೌಡ ಬಾದರ್ಲಿ, ಬಸವರಾಜ ಹಿರೇಗೌಡರ, ಆರ್.ಸಿ. ಪಾಟೀಲ, ಕ್ರಾಂತಿಗೌಡ, ಚಂದ್ರೇಗೌಡ ಹರೇಟನೂರು, ಉದಯಗೌಡ ಗಿಣಿವಾರ, ರಂಗಾರೆಡ್ಡಿ ಸಾಸಲಮರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.