ADVERTISEMENT

ಪೌರಕಾರ್ಮಿಕರಿಗೆ ಆಹಾರಧಾನ್ಯ ಕಿಟ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 12:39 IST
Last Updated 9 ಜೂನ್ 2021, 12:39 IST
ರಾಯಚೂರು ನಗರಸಭೆ ಆವರಣದಲ್ಲಿ ಜಿಲ್ಲಾ ಬಿಜೆಪಿಯಿಂದ ಶಾಸಕ ಡಾ.ಶಿವರಾಜ ಪಾಟೀಲ ಅವರು ಪೌರಕಾರ್ಮಿಕರಿಗೆ ಆಹಾರಧಾನ್ಯದ ಕಿಟ್‌ಗಳನ್ನು ಬುಧವಾರ ವಿತರಿಸಿದರು
ರಾಯಚೂರು ನಗರಸಭೆ ಆವರಣದಲ್ಲಿ ಜಿಲ್ಲಾ ಬಿಜೆಪಿಯಿಂದ ಶಾಸಕ ಡಾ.ಶಿವರಾಜ ಪಾಟೀಲ ಅವರು ಪೌರಕಾರ್ಮಿಕರಿಗೆ ಆಹಾರಧಾನ್ಯದ ಕಿಟ್‌ಗಳನ್ನು ಬುಧವಾರ ವಿತರಿಸಿದರು   

ರಾಯಚೂರು: ಜಿಲ್ಲಾ ಬಿಜೆಪಿ ಪರವಾಗಿ ಶಾಸಕ ಡಾ.ಶಿವರಾಜ ಪಾಟೀಲ ಅವರು ಪೌರಕಾರ್ಮಿಕರಿಗೆ ಬುಧವಾರ ಆಹಾರಧಾನ್ಯಗಳ ಕಿಟ್‌ ವಿತರಿಸಿದರು.

ಆನಂತರ ಮಾತನಾಡಿದ ಅವರುಉ, ಕೋವಿಡ್‌–19 ಸಂದರ್ಭದಲ್ಲೂ ನಗರದ ಸ್ವಚ್ಛತಾ ಕಾರ್ಯ ಮಾಡಿರುವ ಪೌರಕಾರ್ಮಿಕರಿಗೆ ಚಿರಋಣಿಯಾಗಿದ್ದೇನೆ. ಪೌರ ಕಾರ್ಮಿಕರಿಗೆ ₹380 ಕೋಟಿ ವೆಚ್ಚದಲ್ಲಿ 5 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ. ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸುವುದು ಸೇರಿದಂತೆ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಪಡೆಯುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಆರು ಕಾಲಂ ಮನೆ ನಿರ್ಮಾಣ ಮಾಡಲು ಯೋಜಿಸಲಾಗಿದೆ. ನಗರಸಭೆ ಸದಸ್ಯರು ಇಲ್ಲವೇ ನಗರಸಭೆ ನಿರೀಕ್ಷಕರಿಗೆ ಮಾಹಿತಿ ನೀಡಿದರೆ ಶಾಶ್ವತ ಮನೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ADVERTISEMENT

ಕಾರ್ಮಿಕರಿಗೆ ತಾತ್ಕಾಲಿಕವಾಗಿ ನೆರವು ನೀಡಲು ಆಹಾರ ಕಿಟ್ ನೀಡಲಾಗುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸಲು ಪ್ರಯತ್ನಿಸಲಾಗುವುದು ಎಂದರು.

ಜಿಲ್ಲಾ ಅಧ್ಯಕ್ಷ ರಮಾನಂದ ಯಾದವ ಮಾತನಾಡಿ, ಕೊರೊನಾ ವಿರುದ್ಧ ಹೋರಾಟದಲ್ಲಿ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಇನ್ನಷ್ಟು ಎಚ್ಚರದಿಂದ ಇರಲು ಮನವಿ ಮಾಡಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ. ಗೋವಿಂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಯು. ದೊಡ್ಡ ಮಲ್ಲೇಶಪ್ಪಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.