ADVERTISEMENT

ರಾಯಚೂರು: ಉಚಿತ ಆಯುರ್ವೇದ ಆರೋಗ್ಯ ಶಿಬಿರ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 2:43 IST
Last Updated 24 ಸೆಪ್ಟೆಂಬರ್ 2025, 2:43 IST
ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಉಚಿತ ಆಯುರ್ವೇದ ಆರೋಗ್ಯ ಶಿಬಿರವನ್ನು ಮಹಾನಗರ ಪಾಲಿಕೆ ಉಪ ಆಯುಕ್ತೆ ಸಂತೋಷರಾಣಿ ಉದ್ಘಾಟಿಸಿದರು. ತ್ರಿವಿಕ್ರಮ ಜೋಶಿ, ಮಲ್ಲಿಕಾರ್ಜುನ, ಗೌಸ್‌ಕುಮಾರ, ಕಮಲಕುಮಾರ ಜೈನ್ ಉಪಸ್ಥಿತರಿದ್ದರು
ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಉಚಿತ ಆಯುರ್ವೇದ ಆರೋಗ್ಯ ಶಿಬಿರವನ್ನು ಮಹಾನಗರ ಪಾಲಿಕೆ ಉಪ ಆಯುಕ್ತೆ ಸಂತೋಷರಾಣಿ ಉದ್ಘಾಟಿಸಿದರು. ತ್ರಿವಿಕ್ರಮ ಜೋಶಿ, ಮಲ್ಲಿಕಾರ್ಜುನ, ಗೌಸ್‌ಕುಮಾರ, ಕಮಲಕುಮಾರ ಜೈನ್ ಉಪಸ್ಥಿತರಿದ್ದರು   

ರಾಯಚೂರು: ಅರುಜೀವಾ ಆಯುರ್ವೇದ ಆಸ್ಪತ್ರೆ, ರೋಟರಿ ಕ್ಲಬ್ ಹಾಗೂ ರಾಯಚೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಮಂಗಳವಾರ ಉಚಿತ ಆಯುರ್ವೇದ ಆರೋಗ್ಯ ಶಿಬಿರ ನಡೆಯಿತು.

ಮಹಾನಗರ ಪಾಲಿಕೆ ಉಪ ಆಯುಕ್ತೆ ಸಂತೋಷರಾಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಆಯುರ್ವೇದ ಸನಾತನ ಚಿಕಿತ್ಸಾ ಪದ್ಧತಿಯಾಗಿದೆ. ಅದರನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಾಗಿದೆ’ ಎಂದು ಹೇಳಿದರು.

ಅರುಜೀವಾ ಆಯುರ್ವೇದ ಆಸ್ಪತ್ರೆಯ ಮಲ್ಲಿಕಾರ್ಜುನ ಮಾತನಾಡಿ, ‘ಪೌರ ಕಾರ್ಮಿಕ ದಿನ ಹಾಗೂ ರಾಷ್ಟ್ರೀಯ ಆಯುರ್ವೇದ ದಿನವನ್ನು ಒಟ್ಟಿಗೆ ಆಚರಿಸಲಾಗುತ್ತಿದೆ. ಪೌರ ಕಾರ್ಮಿಕರಿಗಾಗಿ ₹ 5 ಸಾವಿರ ವಿಶೇಷ ಪ್ಯಾಕೇಜ್‌ ನೀಡಲಾಗಿದೆ. ಪೌರ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಬೇಕು’ ಎಂದರು.

ADVERTISEMENT

‘ಹಿಂದಿನ ಕಾಲದಲ್ಲಿ ಮನೆಯಲ್ಲಿನ ಹಿರಿಯರು ಸಣ್ಣಪುಟ್ಟ ಕಾಯಿಲೆಗಳಿಗೆ ಮನೆಯಲ್ಲೇ ದೊರೆಯುವ ಸಾಮಗ್ರಿಗಳನ್ನು ಬಳಸಿ ಔಷಧ ಸಿದ್ಧಪಡಿಸಿ ಸೇವಿಸುತ್ತಿದ್ದರು. ಕಾಯಿಲೆಯಿಂದ ಗುಣಮುಖರಾಗುತ್ತಿದ್ದರು. ಜೀವನ ಶೈಲಿ ಬದಲಾದ ಕಾರಣ ಆರೋಗ್ಯದಲ್ಲೂ ಏರುಪೇರು ಆಗುತ್ತಿದೆ’ ಎಂದು ತಿಳಿಸಿದರು.

ಅರುಜೀವಾ ಆಯುರ್ವೇದ ಆಸ್ಪತ್ರೆ ಸಿಇಒ ಗೌಸ್‌ಕುಮಾರ, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಕಮಲಕುಮಾರ ಜೈನ್, ಕಾರ್ಯದರ್ಶಿ ಜಂಬಣ್ಣ ಯಕ್ಲಾಸಪುರ, ತ್ರಿವಿಕ್ರಮ ಜೋಶಿ, ಮಹಾನಗರ ಪಾಲಿಕೆ ಅಧಿಕಾರಿ ಜೈಪಾಲರಡ್ಡಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು ಹಾಗೂ ಉಚಿತವಾಗಿ ಔಷಧ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.