ADVERTISEMENT

ರಾಯಚೂರು ಜಿಲ್ಲಾ ನ್ಯಾಯಾಲಯ ಕಟ್ಟಡಕ್ಕೆ ಹಣ ನಿರಾಕಣೆ: ಹೈಕೋರ್ಟ್‌ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2021, 3:02 IST
Last Updated 8 ಡಿಸೆಂಬರ್ 2021, 3:02 IST
   

ಬೆಂಗಳೂರು: ರಾಯಚೂರು ಜಿಲ್ಲಾ ನ್ಯಾಯಾಲಯಕ್ಕೆ ಹೊಸ ಕಟ್ಟಡ ನಿರ್ಮಿಸಲು ಹಣ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತಂತೆ ರಾಯಚೂರು ವಕೀಲರ ಸಂಘದ ಅಧ್ಯಕ್ಷ ಪಿ. ಬಸವರಾಜು ಸೇರಿದಂತೆ ಒಟ್ಟು 23 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಹೀಗಾಗಿ, ಕೋರ್ಟ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಹಿಂದಿರುಗಿಸಿದೆ’ ಎಂದು ತಿಳಿಸಿದರು.

ADVERTISEMENT

ಈ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ‘ನ್ಯಾಯಾಂಗಕ್ಕೆ ಅಗತ್ಯ ಸೌಲಭ್ಯ ಒದಗಿಸು
ವುದು ಸರ್ಕಾರದ ಆದ್ಯ ಕರ್ತವ್ಯ. ಆರ್ಥಿಕ ಮುಗ್ಗಟ್ಟಿನ ಕಾರಣ ನೀಡಿ, ಹಣ ಬಿಡುಗಡೆಗೆ ನಿರಾಕರಿಸಿರುವುದು ಶೋಭೆ ತರುವಂತಹದ್ದಲ್ಲ, ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.