ADVERTISEMENT

ಮಹಾತ್ಮರ ಅಹಿಂಸಾ ನೀತಿಯಿಂದ ಸ್ವಾತಂತ್ರ್ಯ: ಬಿ.ವಿ.ನಾಯಕ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 13:54 IST
Last Updated 2 ಅಕ್ಟೋಬರ್ 2020, 13:54 IST
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು   

ರಾಯಚೂರು: ಗಾಂಧೀಜಿಯವರ ತ್ಯಾಗ, ಬಲಿದಾನ, ಅಹಿಂಸಾ ನೀತಿಯಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ನಾಯಕ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ ಶಾಸ್ತ್ರಿಯವರ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ರೈತ, ಕಾರ್ಮಿಕ ವಿರೋಧಿ ಕಾನೂನು ತಿದ್ದುಪಡಿ ವಿರೋಧಿಸಿ ಕಿಸಾನ್-ಮಜ್ದೂರ್ ಬಚಾವೊ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧೀಜಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅವಿನಾಭಾವ ಸಂಬಂಧ ಇದೆ. ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧೀಜಿಯವರು ಕಾಂಗ್ರೆಸ್ ಸಂಘಟನೆಯನ್ನು ಸದೃಢ ಶಕ್ತಿಯನ್ನಾಗಿ ಬೆಳೆಸಿದ್ದರು. ಲಾಲ್ ಬಹಾದ್ದೂರ್ ಶಾಸ್ತ್ರಿಯವರು ಕೂಡ ಪ್ರಧಾನಿಯಾಗಿ ಈ ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.

ADVERTISEMENT

ಕೆಪಿಸಿಸಿ ವಕ್ತಾರ ಎ.ವಸಂತ ಕುಮಾರ, ಮುಖಂಡರಾದ ಪಾರಸಮಲ್ ಸುಖಾಣಿ, ರವಿ ಬೋಸರಾಜು, ಜಿ.ಬಸವರಾಜರೆಡ್ಡಿ, ಕೆ.ಶಾಂತಪ್ಪ, ಜಯವಂತರಾವ ಪತಂಗೆ, ಅಮರೇಗೌಡ ಹಂಚಿನಾಳ, ಜಿ.ಶಿವಮೂರ್ತಿ, ತಾಯಣ್ಣ ನಾಯಕ, ಜಯಣ್ಣ, ರುದ್ರಪ್ಪ ಅಂಗಡಿ, ಅಬ್ದುಲ್ ಕರೀಂ, ಜಿಂದಪ್ಪ, ಜಿ.ಸುರೇಶ, ಬಿ.ರಮೇಶ, ಮಂಜುಳಾ ಆದೋನಿ, ವಂದನಾ, ಶಶಿಕಲಾ ಭೀಮರಾಯ, ಪ್ರತಿಭಾರೆಡ್ಡಿ, ರಾಜೇಶ್ವರಿ, ಪದ್ಮಾವತಿ ಕುರ್ಡಿ, ರಾಣಿ ರಿಚರ್ಡ್, ರಜಿಯಾ ಪಾಟೇಲ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.