ADVERTISEMENT

ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 8:08 IST
Last Updated 14 ಫೆಬ್ರುವರಿ 2026, 8:08 IST
ಸಿಂಧನೂರಿನ ಜೆಸ್ಕಾಂ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದಿಂದ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಗುರುವಾರ ಜೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು
ಸಿಂಧನೂರಿನ ಜೆಸ್ಕಾಂ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದಿಂದ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಗುರುವಾರ ಜೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು   

ಸಿಂಧನೂರು: ಕೇಂದ್ರ ಸರ್ಕಾರದ ನಿಯೋಜಿತ 2026 ರ ವಿದ್ಯುತ್ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಸ್ಥಳೀಯ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದಿಂದ ಗುರುವಾರ ಪ್ರತಿಭಟನಾ ನಡೆಸಲಾಯಿತು.

ವಿಭಾಗೀಯ ಕಚೇರಿಯ ಬಸವರಾಜ ಹೂಗಾರ ಮಾತನಾಡಿ ಖಾಸಗೀಕರಣ ತಡೆಯಲು ಸಂಘಟಿತ ಹೋರಾಟ ಅಗತ್ಯವಾಗಿದೆ. ಅದರ ಜೊತೆಗೆ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸುವುದು ಅಷ್ಟೇ ಅಗತ್ಯವಾಗಿದೆ ಎಂದರು.

ನೌಕರರ ಸಂಘದ ಕಾರ್ಯದರ್ಶಿ ಎಸ್.ಬಿ.ಹಿರೇಮಠ ‘ಪ್ರತಿಭಟನೆ ಕೇವಲ ಸಾಂಕೇತಿಕವಾಗಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಕೈ ಬಿಡದೆ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

ಕಾರ್ಯನಿರ್ವಾಹಕ ಎಂಜಿನಿಯರ್ ವಿಷ್ಣು, ಸಹಾಯಕ ಕಾರ್ಯನಿರ್ವಾಹಕರ ಎಂಜಿನಿಯರ್‌ಗಳಾದ ಮಲ್ಲಿಕಾರ್ಜುನ, ಮಂಜುನಾಥ, ಪ್ರತಿಭಾ ಹಿರೇಮನಿ, ನೌಕರರ ಸಂಘದ ಅಧ್ಯಕ್ಷ ಸರಸ್ವತೆಪ್ಪ, ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜ್, ಕಾರ್ಯದರ್ಶಿ ಶರಣಪ್ಪ, ಗುತ್ತಿಗೆದಾರರ ಸಂಘದ ಮುಖಂಡ ಅನ್ವರ್‌ಮಿಯಾ, ಪತ್ತಿನ ಸಹಕಾರಿಯ ನಿರ್ದೇಶಕ ವೀರೇಶ ಹೊಸಳ್ಳಿ, ಪಿಂಚಣಿದಾರರ ಸಂಘದ ಅಮನ್‌ಸಿಂಗ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.