ADVERTISEMENT

ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯಿರಿ: ನ್ಯಾಯಾಧೀಶ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 15:18 IST
Last Updated 11 ಅಕ್ಟೋಬರ್ 2019, 15:18 IST
ರಾಯಚೂರಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಎಂ.ಸಿ.ನಾಡಗೌಡ ಮಾತನಾಡಿದರು
ರಾಯಚೂರಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಎಂ.ಸಿ.ನಾಡಗೌಡ ಮಾತನಾಡಿದರು   

ರಾಯಚೂರು: ವಿವಿಧ ಕಾರಣಗಳಿಂದ ಯುವಕರು ಮಾನಸಿಕ ಅಸ್ವಸ್ಥತೆಗೆ ಒಳಗಾಗುತ್ತಿದ್ದು, ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಬೇಕು ಎಂದು ನ್ಯಾಯಾಧೀಶ ಎಂ.ಸಿ.ನಾಡಗೌಡ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಇಲಾಖೆಯ ಡಾ.ಎಂ.ಎನ್.ನಂದಿತಾ ಹಾಗೂ ಮನೋವೈದ್ಯ ಡಾ.ಮನೋಹರ್ ಪತ್ತಾರ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ದಸ್ತಗೀರ್ ಸಾಬ್ ದಿನ್ನಿ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕವಿತಾ, ನೇಹಾ ಹಾಗೂ ಪರಶುರಾಮ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದುಕೊಂಡರು.

ಉಪನ್ಯಾಸಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಮಲ್ಲನಗೌಡ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.