ADVERTISEMENT

‘ಗೋಬ್ಯಾಕ್ ಸದಾನಂದಗೌಡ’ ರಾಯಚೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 7:29 IST
Last Updated 5 ಅಕ್ಟೋಬರ್ 2019, 7:29 IST
ರಾಯಚೂರಿನಲ್ಲಿ ಶನಿವಾರ ಸಚಿವ ಡಿ.ವಿ.ಸದಾನಂದಗೌಡ ವಿರುದ್ಧ ಗೋಬ್ಯಾಕ್ ಚಳವಳಿ ನಡೆಯಿತು.
ರಾಯಚೂರಿನಲ್ಲಿ ಶನಿವಾರ ಸಚಿವ ಡಿ.ವಿ.ಸದಾನಂದಗೌಡ ವಿರುದ್ಧ ಗೋಬ್ಯಾಕ್ ಚಳವಳಿ ನಡೆಯಿತು.   

ರಾಯಚೂರು: ಕೃಷಿ ವಿಶ್ವವಿದ್ಯಾಲಯದ ಎದುರು ಕೇಂದ್ರ ಸಚಿವ ಸದಾನಂದಗೌಡ ಅವರ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ 'ಗೋ ಬ್ಯಾಕ್' ಪ್ರತಿಭಟನೆ ನಡೆಸಿದರು. ಕೂಡಲೇ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ವಾಹನಗಳಲ್ಲಿ ಕರೆದೊಯ್ದರು.

ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ‘ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸುಸ್ಥಿರ ಅಭಿವೃದ್ಧಿ’ಕುರಿತ ವಿಚಾರ ಸಂಕಿರಣದಲ್ಲಿ ಸಚಿವ ಸದಾನಂದಗೌಡ ಪಾಲ್ಗೊಳ್ಳಬೇಕಿತ್ತು. ಕೊಪ್ಪಳ ಜಿಲ್ಲೆಮುನಿರಾಬಾದ್‌ನಿಂದಸಚಿವರು ರಸ್ತೆಮಾರ್ಗದಲ್ಲಿ ಬರುತ್ತಿರುವ ಸಚಿವರು ರಾಯಚೂರು ತಲುಪುವ ಮೊದಲೇ ಪ್ರತಿಭಟನಾನಿರತರು ಘೋಷಣೆ ಕೂಗಿದರು.

ಪ್ರವಾಹ ಪರಿಹಾರ ನೀಡಲು ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಹಾಗೂ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಅವರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ ದೋತ್ರಬಂಡಿ, ಅಸ್ಲಂಪಾಷಾ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.