ADVERTISEMENT

ಸಿರವಾರ | ಬಸ್‌ಗೆ ಗೂಡ್ಸ್ ವಾಹನ ಡಿಕ್ಕಿ: ವ್ಯಕ್ತಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 14:31 IST
Last Updated 26 ಅಕ್ಟೋಬರ್ 2024, 14:31 IST
ಸಿರವಾರ ತಾಲ್ಲೂಕಿನ ಅತ್ತನೂರು ಸಮೀಪದ ಬಸ್ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿರುವ ಗೂಡ್ಸ್ ವಾಹನ
ಸಿರವಾರ ತಾಲ್ಲೂಕಿನ ಅತ್ತನೂರು ಸಮೀಪದ ಬಸ್ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿರುವ ಗೂಡ್ಸ್ ವಾಹನ   

ಸಿರವಾರ: ಬಸ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗೂಡ್ಸ್ ವಾಹನದ ಚಾಲಕ ಸಮೀರ್‌(23 ವರ್ಷ) ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಲ್ಲೂಕಿನ ಅತ್ತನೂರು ಸಮೀಪ ಶನಿವಾರ ಸಂಜೆ  ಈ ಅವಘಡ ಸಂಭವಿಸಿದೆ.

ಗಾಯಾಳುವನ್ನು ಚಿಕಿತ್ಸೆಗಾಗಿ ರಾಯಚೂರು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ದುರಂತದಲ್ಲಿ ಗೂಡ್ಸ್ ವಾಹನ ಜಖಂಗೊಂಡಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿರವಾರ ತಾಲ್ಲೂಕಿನ ಅತ್ತನೂರು ಸಮೀಪದ ಬಸ್ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡು ಗೂಡ್ಸ್ ವಾಹನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT