ಮಾನ್ವಿ: ರಾಯಚೂರಿನ ರಂಗಕುಸುಮ ಸಾಂಸ್ಕೃತಿಕ ಕಲಾ ಸಂಘದಿಂದ ಪ್ರತಿ ವರ್ಷ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯಮಟ್ಟದ ಯುವರತ್ನ ಪ್ರಶಸ್ತಿಗೆ ತಾಲ್ಲೂಕಿನ ಯುವ ಸಾಹಿತಿ ಹಾಗೂ ಶಿಕ್ಷಕ ಗೋಪಾಲ ನಾಯಕ ಜೂಕೂರು ಆಯ್ಕೆಯಾಗಿದ್ದಾರೆ.
ಗೋಪಾಲ ನಾಯಕ ಜೂಕೂರು ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಪ್ರತಿ ವರ್ಷ ನೂರಾರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡುತ್ತಿರುವುದನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಂಗಕುಸುಮ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಸಿದ್ದೇಶ್ ವಿರಕ್ತಮಠ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.