ADVERTISEMENT

ಸರ್ಕಾರಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಶಾಸಕ ತುರ್ವಿಹಾಳ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 6:05 IST
Last Updated 15 ಸೆಪ್ಟೆಂಬರ್ 2025, 6:05 IST
ಮಸ್ಕಿ ಭ್ರಮರಾಂಬ ದೇವಸ್ಥಾನದಲ್ಲಿ ಭಾನುವಾರ ನಡೆದ ಸರ್ಕಾರಿ ನೌಕರರ ತಾಲ್ಲೂಕು ಸಮಾವೇಶ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು
ಮಸ್ಕಿ ಭ್ರಮರಾಂಬ ದೇವಸ್ಥಾನದಲ್ಲಿ ಭಾನುವಾರ ನಡೆದ ಸರ್ಕಾರಿ ನೌಕರರ ತಾಲ್ಲೂಕು ಸಮಾವೇಶ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು   

ಮಸ್ಕಿ: ‘ಕಲ್ಯಾಣ ಕರ್ನಾಟಕ ಭಾಗ ಸೇರಿ ರಾಜ್ಯದ ಸರ್ಕಾರಿ ನೌಕರರ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಈಡೇರಿಸಿದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಭಾನುವಾರ ನಡೆದ ಸರ್ಕಾರಿ ನೌಕರರ ತಾಲ್ಲೂಕು ಸಮಾವೇಶ ಹಾಗೂ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿರುವುದು ಕಳವಳಕಾರಿ, ಶಿಕ್ಷಕರು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ. ಬರುವ ದಿನಗಳಲ್ಲಿ ನೌಕರರ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ತಹಶೀಲ್ದಾರ್ ಮಂಜುನಾಥ ಬೋಗಾವತಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ, ಡಾ. ಶಿವಶರಣ್ಪ ಇತ್ಲಿ, ಮಹಾಂತೇಶ ಮಸ್ಕಿ, ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ವೆಂಕಟರೆಡ್ಡಿ ಹಾಲಾಪೂರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಾಪೂರ, ಹನುಮಂತಪ್ಪ ಮುದ್ದಾಪೂರ, ಬಸನಗೌಡ ಪೊಲೀಸ್‌ ಪಾಟೀಲ, ಸಿದ್ದನಗೌಡ ಮಾಟೂರು, ಬಸವಂತಪ್ಪ ಮಟ್ಟೂರು, ಶಿಕ್ಷಣ ಇಲಾಖೆಯ ಬಸ್ಸಪ್ಪ ಟಿನಿಕೆದಾರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪಾಪತಿ ಹೂಗಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ, ಬಾಲಸ್ವಾಮಿ ಸೇರಿದಂತೆ ನೌಕರರ ಸಂಘದ ಅಂಗ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಇದಕ್ಕೂ‌ ಮುಂಚೆ ಗಾಂಧಿ ನಗರದಿಂದ ಆರಂಭವಾದ ಸರ್ಕಾರಿ ನೌಕರರ ಮೆರವಣಿಗೆಯು ಭ್ರಮರಾಂಬ ದೇವಸ್ಥಾನದವರೆಗೆ ನಡೆಯಿತು.‌ ವಿವಿಧ ಜಾನಪದ ತಂಡಗಳು ಪಾಲ್ಗೊಂಡಿದ್ದವು.

ಸರ್ಕಾರಿ ನೌಕರರು ಜೀವ ಭಯದಲ್ಲಿ ಕೆಲಸ ಮಾಡುವ ವಾತಾವರಣ ಇದೆ. ಸರ್ಕಾರ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಲು ಮುಂದಾಗಲಿ ‌
ಪಂಪಾಪತಿ ಹೂಗಾರ ಅಧ್ಯಕ್ಷ ಸರ್ಕಾರಿ ನೌಕರರ ಸಂಘ ಮಸ್ಕಿ
ಶಿಕ್ಷಕರಿಗೆ ಹೆಚ್ಚಿನ ಗೌರವ- ಪ್ರತಾಪಗೌಡ
ಸಾಮಾಜದಲ್ಲಿ ಶಿಕ್ಷಕರಿಗೆ ಇರುವ ಗೌರವ ಹಾಗೂ ಸ್ಥಾನಮಾನ ಯಾರಿಗೂ ಇಲ್ಲಾ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು. ಶಿಕ್ಷಕರು ತಮ್ಮ ಸ್ಥಾನಮಾನಗಳಿಗೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.‌ ಸರ್ಕಾರದ ಎಲ್ಲಾ ಸೌಲಭ್ಯಗಳು ಇದ್ದರು ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ. ಈ ಬಗ್ಗೆ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು ಎಂದರು. ಶಾಲೆ ತೆರೆಯುವ ಮೊದಲು ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಭರ್ತಿಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.